ಶನಿವಾರ, ಮೇ 8, 2021
26 °C

`ಬೆದರಿಕೆಯ ಹಿಂದೆ ವಿರೋಧ ಪಕ್ಷಗಳ ಕೈವಾಡ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

`ಬೆದರಿಕೆಯ ಹಿಂದೆ ವಿರೋಧ ಪಕ್ಷಗಳ ಕೈವಾಡ'

ಚಿಕ್ಕಬಳ್ಳಾಪುರ: ತೈಲ ಆಮದಿಗೆ ಸಂಬಂಧಿಸಿದಂತೆ ಲಾಬಿ, ಒತ್ತಡ ಮತ್ತು ಬೆದರಿಕೆ ಎದುರಿಸುತ್ತಿರುವುದಾಗಿ ಹೇಳಿದ್ದ ಕೇಂದ್ರ ಪೆಟ್ರೋಲಿಯಂ ಸಚಿವ ಎಂ.ವೀರಪ್ಪ ಮೊಯಿಲಿಯವರು, `ಬೆದರಿಕೆ ನನಗಲ್ಲ, ತೈಲ ಆಮದಿಗೆ ಸಂಬಂಧಿಸಿದಂತೆ ನಾನು ಕೈಗೊಂಡಿರುವ ನಿರ್ಣಯಗಳಿಗೆ ಬೆದರಿಕೆ ಒಡ್ಡಲಾಗುತ್ತಿದೆ' ಎಂದು ಶನಿವಾರ ಇಲ್ಲಿ ಸ್ಪಷ್ಟಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ನನಗೆ ಯಾರೂ ಬೆದರಿಕೆ ಒಡ್ಡಿಲ್ಲ. ಆದರೆ ತೈಲ ಆಮದಿಗೆ ಸಂಬಂಧಿಸಿದಂತೆ ನಾನು ಕೈಗೊಂಡಿರುವ ನಿರ್ಣಯಗಳಿಗೆ ಬೆದರಿಕೆ ಮತ್ತು ಒತ್ತಡ ವ್ಯಕ್ತವಾಗುತ್ತಿದೆ. ಇದರ ಹಿಂದೆ ವಿರೋಧ ಪಕ್ಷಗಳ ಕೈವಾಡವಿದೆ' ಎಂದರು. ಯಾವ್ಯಾವ ಪಕ್ಷಗಳ ಕೈವಾಡವಿದೆ ಎಂಬ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.