ಬೆಲೆ ಏರಿಕೆ: ಬಿಜೆಪಿ ಪ್ರತಿಭಟನೆ

ಶನಿವಾರ, ಜೂಲೈ 20, 2019
22 °C

ಬೆಲೆ ಏರಿಕೆ: ಬಿಜೆಪಿ ಪ್ರತಿಭಟನೆ

Published:
Updated:

ನವದೆಹಲಿ (ಐಎಎನ್‌ಎಸ್): ಬೆಲೆ ಏರಿಕೆ ವಿರೋಧಿಸಿ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಕಚೇರಿಯ ಎದುರು ಶನಿವಾರ ಬಿಜೆಪಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.ಇಲ್ಲಿನ ಅಕ್ಬರ್ ರಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ನೂರಾರು ಬಿಜೆಪಿ ಮಹಿಳಾ ಮೋರ್ಚಾ ಕಾರ್ಯಕರ್ತೆಯರು ಭಿತ್ತಿಪತ್ರಗಳನ್ನು ಕೈಯಲ್ಲಿ ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಪ್ರತಿಭಟನೆ ಮಾಡಿದರು.ಪ್ರತಿಭಟನಾಕಾರರು ರಸ್ತೆಯಲ್ಲಿದ್ದ `ಬ್ಯಾರಿಕೇಡ್'ಗಳನ್ನು ಕಿತ್ತು ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನೆಯನ್ನು ಚದುರಿಸಲು ಜಲಫಿರಂಗಿ ಬಳಸಿದರು. ಕೆಲ ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry