ಬುಧವಾರ, ಮೇ 12, 2021
17 °C

ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಪೆಟ್ರೋಲ್ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸೋಮವಾರ ಬಿಜೆಪಿ ಜಿಲ್ಲಾ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಗಾಂಧಿ ವೃತ್ತದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದ ದಿನದಿಂದ ಬೆಲೆ ಏರಿಕೆ ಮಾಡುವುದೇ ದೊಡ್ಡ ಸಾಧನೆಯಾಗಿದೆ. ಜನ ಸಾಮಾನ್ಯರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿಯಿಲ್ಲ. ಹಗರಣಗಳಲ್ಲಿ ಸಿಲುಕಿರುವ ಕಾಂಗ್ರೆಸ್ `ಕೈ' ಮತ್ತು `ಮುಖ' ಎರಡನ್ನು ಮಸಿ ಮಾಡಿಕೊಂಡಿದೆ ಎಂದು ದೂರಿದರು. ಬಿಜೆಪಿ ನಗರ ಘಟಕದ ಅಧ್ಯಕ್ಷ ನರೇಂದ್ರನಾಥ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಬಡ ಕುಟುಂಬಗಳಿಗೆ ರೂ 1ಕ್ಕೆ 1 ಕೆ.ಜಿ ಅಕ್ಕಿ ನೀಡುವ ಘೋಷಿಸಿ ಅಗ್ಗದ ಪ್ರಚಾರ ಪಡೆದುಕೊಂಡರು. ಆದರೆ, ಈಗ   ಯೋಜನೆಯನ್ನು ಮುಂದೂಡುತ್ತಾ ಜನ ಸಾಮಾನ್ಯರಿಗೆ ಆಸೆ ತೋರಿಸಿ ವಂಚಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎಂ.ಪಿ.ಗುರುರಾಜ್, ತಿಪ್ಪೇಸ್ವಾಮಿ, ಮುಖಂಡರಾದ ಪ್ರತಾಪ್ ರುದ್ರದೇವ್, ಶಿವಣ್ಣಾಚಾರ್, ಎನ್.ಇ. ನಾಗರಾಜ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.