ಬುಧವಾರ, ಮೇ 18, 2022
28 °C

ಬೆಲೆ ಏರಿಕೆ ವಿರುದ್ಧ ಸಿಪಿಐ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ ಎಂದು ಆರೋಪಿಸಿ ಸಿಪಿಐ (ಎಂ.ಎಲ್) ಸದಸ್ಯರು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು. ಆಹಾರ ಪದಾರ್ಥಗಳು, ತರಕಾರಿ, ಅಡುಗೆ ಅನಿಲ ಮತ್ತು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ನಿರಂತರವಾಗಿ ಹೆಚ್ಚಾಗುತ್ತಿವೆ. ಇದರಿಂದ ಬಡ ಹಾಗೂ ಮಧ್ಯಮ ವರ್ಗದ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.



ದಿನನಿತ್ಯದ ಬಳಕೆಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಜನಪರ ಕಾಳಜಿಯೇ ಇಲ್ಲ. ಜನ ಸಾಮಾನ್ಯರ ಹಿತ ರಕ್ಷಣೆ ಬಗ್ಗೆ ವಿರೋಧ ಪಕ್ಷಗಳು ಸಹ ಗಮನ ಹರಿಸುತ್ತಿಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದರು. ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸಿ ಜನ ಸಾಮಾನ್ಯರನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.