ಬೆಳಗಾವಿಯಲ್ಲಿ ಮೂಲಸೌಕರ್ಯಕ್ಕೆ 7.16 ಕೋಟಿ ಬಿಡುಗಡೆ

7

ಬೆಳಗಾವಿಯಲ್ಲಿ ಮೂಲಸೌಕರ್ಯಕ್ಕೆ 7.16 ಕೋಟಿ ಬಿಡುಗಡೆ

Published:
Updated:

ಬೆಂಗಳೂರು: ಮಾರ್ಚ್ ತಿಂಗಳಿನಲ್ಲಿ ವಿಶ್ವಕನ್ನಡ ಸಮ್ಮೇಳನ ನಡೆಯ ಲಿರುವ ಹಿನ್ನೆಲೆಯಲ್ಲಿ ಬೆಳಗಾವಿ ನಗರಕ್ಕೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಅಲ್ಲಿನ ಮಹಾನಗರ ಪಾಲಿ ಕೆಗೆ ರಾಜ್ಯ ಹಣಕಾಸು ಆಯೋಗ ದಿಂದ 7.16 ಕೋಟಿ ರೂಪಾಯಿ ವಿಶೇಷ ಅನುದಾನ ಬಿಡುಗಡೆ ಮಾಡ ಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಎಸ್. ಸುರೇಶ್‌ಕುಮಾರ್ ತಿಳಿಸಿದರು.ಸಮ್ಮೇಳನದ ಪೂರ್ವಸಿದ್ಧತೆ ಕುರಿತು ಸೋಮವಾರ ವಿಕಾಸ ಸೌಧದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರ ಜೊತೆ ವಿಡಿಯೊ ಕಾನ್ಫರೆನ್ಸ್ ನಡೆಸಿದ ಬಳಿಕ ಪತ್ರಕರ್ತರ ಜೊತೆ ಮಾತನಾಡಿದ ಸಚಿವರು ಈ ವಿಷಯ ತಿಳಿಸಿದರು.ಬೆಳಗಾವಿ ನಗರದ ರಸ್ತೆಗಳ ಗುಂಡಿಗಳನ್ನು ಮುಚ್ಚುವುದು, ತೀರಾ ದುಸ್ಥಿತಿ ಯಲ್ಲಿರುವ ರಸ್ತೆಗಳ ದುರಸ್ತಿ ಮತ್ತಿತರ ಕಾಮಗಾರಿಗಳನ್ನು ತಕ್ಷಣವೇ ಕೈಗೆತ್ತಿಕೊಳ್ಳಲು ಸೂಚಿಸಲಾಗಿದೆ. ಸಮ್ಮೇಳನದ ಸಮಯದಲ್ಲಿ ನಗರವನ್ನು ಸ್ವಚ್ಛವಾಗಿಡಲು ಹೆಚ್ಚು ವರಿ ಪೌರ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳ ಲಾಗುವುದು ಎಂದರು. ಅಗತ್ಯ ಇರುವ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರು ವಿತರಣೆ ಕೇಂದ್ರ, ಶೌಚಾಲಯ ಸ್ಥಾಪಿಸಲಾಗುವುದು ಎಂದರು.ಸಮ್ಮೇಳನಕ್ಕೆ ಪೂರಕವಾಗಿ ಮೂಲ ಸೌಕರ್ಯ ಕಲ್ಪಿಸಲು ರಾಜ್ಯ ಹಣ ಕಾಸು ಆಯೋಗ ಈಗಾಗಲೇ ವಿಶೇಷ ಅನುದಾನ ಬಿಡುಗಡೆ ಮಾಡಿದೆ. ತಕ್ಷಣವೇ ಅಗತ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸ ಲಾಗಿದೆ. ಪ್ರತಿನಿತ್ಯ ಸಂಜೆ ಈ ಕಾಮಗಾರಿಗಳ ಪ್ರಗತಿ ಪರಿಶೀಲಿಸುವಂತೆ ಜಿಲ್ಲಾಧಿಕಾರಿ ಮತ್ತು ಪಾಲಿಕೆ ಆಯುಕ್ತರಿಗೆ ವಿಡಿಯೊ ಕಾನ್ಫರೆನ್ಸ್‌ನಲ್ಲಿ ನಿರ್ದೇಶನ ನೀಡಲಾಗಿದೆ ಎಂದರು.ನಗರದ ಸೌಂದರ್ಯ ಹೆಚ್ಚಿಸುವ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಈ ಸಂಬಂಧ 24 ವೃತ್ತ ಗಳನ್ನು ಗುರುತಿಸಿದ್ದು, ಅಲ್ಲಿ ಕನ್ನಡತನ ಬಿಂಬಿ ಸುವ ಫಲಕಗಳನ್ನು ಅಳವಡಿಸ ಲಾಗುವುದು. ಬೀದಿ ದೀಪಗಳ ಅಳ ವಡಿಕೆ, ಪಾದಚಾರಿ ಮಾರ್ಗಗಳನ್ನು ಮೇಲ್ದರ್ಜೆಗೇರಿ ಸುವುದು ಸೇರಿದಂತೆ ನಗರದ ಸೌಂದರ್ಯ ವೃದ್ಧಿಯ ದಿಸೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳ ಲಾಗುವುದು ಎಂದು ಸುರೇಶ್ ಕುಮಾರ್ ವಿವರಿಸಿದರು.50 ಸಾವಿರ ಜನರಿಗೆ ವಸತಿ: ಸಮ್ಮೇಳನಕ್ಕೆ ವಿವಿಧೆಡೆಯಿಂದ ಆಗ ಮಿಸುವ 50 ಸಾವಿರ ಜನರಿಗೆ ವಸತಿ ಸೌಕರ್ಯ ಕಲ್ಪಿಸಲು ಸಿದ್ಧತೆ ನಡೆ ದಿದೆ. ಅತಿಥಿಗಳು ತಂಗುವ ಸ್ಥಳಗಳಲ್ಲಿ ನೈರ್ಮಲ್ಯ ಕಾಯ್ದುಕೊಳ್ಳಲು ಆದ್ಯತೆ ನೀಡಲಾಗುವುದು.

ಈ ಅವಧಿಯಲ್ಲಿ ಸುಗಮ ಸಂಚಾರಕ್ಕಾಗಿ ಹೆಚ್ಚುವರಿ ಬಸ್‌ಗಳನ್ನು ಬಿಡಲಾಗುವುದು ಎಂದರು.ಕನ್ನಡ ಮತ್ತು ಸಂಸ್ಕೃತಿ ಸಚಿವ ಗೋವಿಂದ ಎಂ.ಕಾರಜೋಳ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ‘ಮುಖ್ಯಮಂತ್ರಿ’ ಚಂದ್ರು, ನಗರಾ ಭಿವೃದ್ಧಿ ಇಲಾಖೆ ಕಾರ್ಯದರ್ಶಿ ಶಂಭುದಯಾಳ್ ಮೀನಾ, ಪೌರಾ ಡಳಿತ ಇಲಾಖೆ ಆಯುಕ್ತ ಅಂಜುಂ ಪರ್ವೇಜ್ ಮತ್ತಿತರರು ವಿಡಿಯೊ ಕಾನ್ಫರೆನ್ಸ್‌ನಲ್ಲಿ ಪಾಲ್ಗೊಂಡಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry