ಬೆಳಗಾವಿ- ಜಂಟಿ ಅಧಿವೇಶನ ಅಲ್ಲ

7

ಬೆಳಗಾವಿ- ಜಂಟಿ ಅಧಿವೇಶನ ಅಲ್ಲ

Published:
Updated:

ಬೆಂಗಳೂರು: ಬೆಳಗಾವಿಯಲ್ಲಿ ಇದೇ 11ರಂದು ಸುವರ್ಣಸೌಧ ಉದ್ಘಾಟಿಸಿದ ಬಳಿಕ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ವಿಧಾನಮಂಡಲದ ಉಭಯ ಸದನಗಳ ಸದಸ್ಯರು, ಸಂಸದರು ಮತ್ತು ಗಣ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. 

 

ವಿಧಾನಮಂಡಲದ ಜಂಟಿ ಅಧಿವೇಶನ ಉದ್ದೇಶಿಸಿ ರಾಷ್ಟ್ರಪತಿ ಭಾಷಣ ಮಾಡಲಿದ್ದಾರೆ ಎಂಬ ಸುದ್ದಿಯಲ್ಲಿ ಹುರುಳಿಲ್ಲ. ಸಂವಿಧಾನದಲ್ಲಿ ಇದಕ್ಕೆ ಅವಕಾಶ ಇಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಸ್. ಸುರೇಶಕುಮಾರ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry