ಬೆಳಗಾವಿ ವಿಭಾಗ: ದಸರಾ ಕ್ರೀಡಾಕೂಟಕ್ಕೆ ಚಾಲನೆ

7

ಬೆಳಗಾವಿ ವಿಭಾಗ: ದಸರಾ ಕ್ರೀಡಾಕೂಟಕ್ಕೆ ಚಾಲನೆ

Published:
Updated:

ಬೆಳಗಾವಿ: ಪ್ರಸಕ್ತ ಸಾಲಿನ ಬೆಳಗಾವಿ ವಿಭಾಗ ಮಟ್ಟದ ದಸರಾ  ಕ್ರೀಡಾಕೂಟದ ಉದ್ಘಾಟನೆಯನ್ನು ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಕರ್ನಾಟಕ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮ ಅಧ್ಯಕ್ಷ ಶಂಕರಗೌಡ ಪಾಟೀಲ ಸೋಮವಾರ ಉದ್ಘಾಟಿಸಿದರು.ಕ್ರೀಡಾ ಧ್ವಜಾರೋಹಣ ನೆರವೇರಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ವಿಭಾಗದ ಮತ್ತು ಜಿಲ್ಲೆಯ ಕ್ರೀಡಾಪಟುಗಳು ಹೆಚ್ಚಿನ ಪರಿಶ್ರಮ ವಹಿಸಿ ಮೈಸೂರಿನಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಪ್ರಶಸ್ತಿ ಗೆದ್ದು ಜಿಲ್ಲೆಗೆ ಹೆಸರು ತಂದುಕೊಡಬೇಕು ಎಂದು ಹೇಳಿದರು.ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಎಂ. ಐ. ಸುಳೇಬಾವಿ, ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಉಪ ನಿರ್ದೇಶಕ ಬಿ.ಜೆ. ಪೂಜಾರ, ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನಿವೃತ್ತ ಕ್ರೀಡಾ ನಿರ್ದೇಶಕ ಜಿ.ಎನ್. ಪಾಟೀಲ ಹಾಜರಿದ್ದರು.ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ನಿರ್ದೇಶಕ ಬಸವರಾಜ ಎಚ್ ಸ್ವಾಗತಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ಭರಮನ್ನವರ ನಿರೂಪಿಸಿದರು.ಸೈಕ್ಲಿಂಗ್ ತರಬೇತುದಾರ ಎಂ. ಪಿ. ಮರನೂರ ವಂದಿಸಿದರು. ಕ್ರೀಡಾಕೂಟದಲ್ಲಿ ಬೆಳಗಾವಿ ವಿಭಾಗದ ಏಳು ಜಿಲ್ಲೆಗಳ ಕ್ರೀಡಾಪಟುಗಳು ಭಾಗವಹಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry