ಶುಕ್ರವಾರ, ಮೇ 14, 2021
29 °C

ಬೆಳೆ ನಷ್ಟ: ಪರಿಹಾರಕ್ಕೆ ಕಾಂಗ್ರೆಸ್‌ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಳಿಯಾಳ: ತಾಲ್ಲೂಕಿನಲ್ಲಿ ಕುಡಿಯುವ ನೀರಿನ ಅಭಾವ ನೀಗಿಸಬೇಕು ಹಾಗೂ ಅತಿವೃಷ್ಟಿಯಿಂದ ಹಾಳಾದ ಬೆಳೆಗೆ ಶೀಘ್ರ ಪರಿಹಾರ ನೀಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು  ಮುಂದಿರಿಸಿಕೊಂಡು ಬ್ಲಾಕ್ ಕಾಂಗ್ರೆಸ್ ಕಮಿಟಿ ಕಾರ್ಯಕರ್ತರು ಹಳಿಯಾಳದಲ್ಲಿ ಸೋಮವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.ವಿಧಾನ ಪರಿಷತ್ ಸದಸ್ಯರ ಕಚೇರಿ ಬಳಿ ಸೇರಿದ ನೂರಾರು ಕಾರ್ಯಕರ್ತರು ಘೋಷಣೆ ಕೂಗುತ್ತ ನಗರದ ಮುಖ್ಯ ರಸ್ತೆಗಳ ಮೂಲಕ ಮೆರವಣಿಗೆಯಲ್ಲಿ ತೆರಳಿ ಉಪತಹಶೀಲ್ದಾರ ಎಚ್.ಎಂ. ಓಲೇಕರ ಅವರ ಮುಖಾಂತರ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ತಾಲ್ಲೂನಲ್ಲಿ ಕುಡಿಯುವ ನೀರಿನ ಅಭಾವ ತೀವ್ರ ವಾಗಿದ್ದು ಬಹುತೇಕ ಗ್ರಾಮೀಣ ಪ್ರದೇಶಗಳಲ್ಲಿ ಇದು ದೊಡ್ಡ ಸಮಸ್ಯೆಯಾಗಿ ಮಾರ್ಪಟ್ಟಿದೆ. ಕೆರೆಗಳು ಒಣಗಿ ದನಕರು, ಪಶು-ಪ್ರಾಣಿಗಳಿಗೆ ನಿರಿಲ್ಲದಾಗಿದೆ. ಹೀಗಿದ್ದೂ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಯಾರೂ ಮುಂದಾಗ್ಲ್ಲಿಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.ಸರ್ಕಾರ ಹಾಗೂ ತಾಲ್ಲೂಕು ಆಡಳಿತ ನಿಷ್ಕ್ರಿಯ ವಾಗಿದೆ. ಇದು ಖಂಡನೀಯ ಎಂದು ಅವರ ಹೇಳಿದರು.

ತಾಲ್ಲೂಕಿನಲ್ಲಿ ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್‌ನಿಂದಾಗಿ ರೈತರು ಮತ್ತು ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಬಹಳಷ್ಟು ರಸ್ತೆಗಳು ಹಾಳಾಗಿವೆ. ಪಡಿತರ ಚೀಟಿಯ ವಿಳಂಬ, ಅಂಗವಿಕಲರಿಗೆ, ವಿಧವೆಯರಿಗೆ ಹಾಗೂ ಹಿರಿಯ ನಾಗರಿಕರಿಗೆ ವೇತನ ಮಂಜೂರಾತಿ ಮಾಡಬೇಕು ಎಂದು ಅವರು ಆಗ್ರಹಿಸಿದರು.ಇತ್ತೀಚೆಗೆ ಬಿದ್ದ ಆಲಿಕಲ್ಲು ಮಳೆಯಿಂದ ಬಡಾಕಾನಶಿರಡಾ ಮತ್ತಿತರ ಭಾಗಗಳಲ್ಲಿ ಬೆಳೆ ಹಾನಿಯಾಗಿದೆ. ಗಾಳಿಗೆ ಮನೆ ಹಾಗೂ  ಕಟ್ಟಡಗಳಿಗೆ ಹಾನಿಯಾಗಿದೆ. ಇದಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಸುಭಾಸ ಕೋರ್ವೆಕರ, ಪಕ್ಷದ ಜಿಲ್ಲಾ ಘಟಕದ ಉಪಾಧ್ಯಕ್ಷರಾದ ಪ್ರಮೋದ ಪಾಟೀಲ, ಪಟ್ಟಣ ಪಂಚಾಯಿತಿ ಸದಸ್ಯ ಉಮೇಶ ಬೋಳಶೆಟ್ಟಿ, ಐ.ಸಿ.ಕಾಮಕರ, ನಾಗೇಂದ್ರ ಉಪ್ಪಾರ, ಬಾಬು ಮಿರಾಶಿ, ಅನಿಲ ಫರ್ನಾಂಡಿಸ್, ರೋಹನ್ ಬಗ್ರಾಂಜಾ, ಮನೋಹರ ಮಿರಾಶಿ, ಸಂತೋಷ ಹುಂಡೇಕರ, ಅನಿಲ ಚೌಹಾಣ, ವಿಕ್ಟರ್ ಫನಾಂಡಿಸ್ ಮತ್ತಿತರರು ಭಾಗವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.