ಸೋಮವಾರ, ಮೇ 17, 2021
29 °C

ಬೆಳೆ ಪರಿಹಾರಕ್ಕೆ ರೂ 322.28 ಕೋಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ರಾಜ್ಯದಲ್ಲಿ 2012-13ನೇ ಸಾಲಿನಲ್ಲಿ ಬರಪೀಡಿತ ತಾಲ್ಲೂಕುಗಳ ರೈತರ ಬೆಳೆ ಹಾನಿಗೆ ಸಹಾಯಧನ ನೀಡಲು ಸರ್ಕಾರವು ರೂ322.28 ಕೋಟಿ ಅನುದಾನವನ್ನು ಈಚೆಗೆ ಬಿಡುಗಡೆ ಮಾಡಿದೆ.2012-13ನೇ ಸಾಲಿನಲ್ಲಿ ಮುಂಗಾರು ಮಳೆ ವೈಫಲ್ಯದಿಂದಾಗಿ ರಾಜ್ಯದಲ್ಲಿ 157 ತಾಲ್ಲೂಕುಗಳನ್ನು ಬರಪೀಡಿತ  ಎಂದು ಘೋಷಿಸಿ, ಅಗತ್ಯ ನೆರವು ನೀಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್ ಅಡಿ ಕೃಷಿ, ತೋಟಗಾರಿಕೆ ಬೆಳೆಗೆ ಸಹಾಯಧನ ನೀಡಲು ಅನುದಾನ ಬಿಡುಗಡೆ ಮಾಡಿದೆ. ಈ ಅನುದಾನದಲ್ಲಿ ಬರ ಪೀಡಿತ ತಾಲ್ಲೂಕುಗಳಲ್ಲಿ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಮಾತ್ರ ಸಹಾಯಧನ ನೀಡಲಾಗುವುದು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.