ಮಂಡ್ಯ: ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಬಹುತೇಕ ಹೋಬಳಿ ವ್ಯಾಪ್ತಿಯಲ್ಲಿ ವಾಡಿಕೆಗಿಂತ ಕಡಿಮೆ ಮಳೆ ಸುರಿದಿದ್ದು, ಬೆಳೆ ರಕ್ಷಣೆ ಸೇರಿ ಪರಿಸ್ಥಿತಿ ಎದುರಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಡಳಿತ ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ಸಲಹೆ ಮಾಡಿದೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ನಡೆದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಜಿಪಂ ಸಿಇಒ ಜಿ. ಜಯರಾಂ ಅವರು, ಮುಖ್ಯವಾಗಿ ಕುಡಿಯುವ ನೀರು ಮತ್ತು ಬೆಳೆ ರಕ್ಷಣೆ ಕ್ರಮಗಳಿಗೆ ಒತ್ತು ನೀಡಬೇಕು ಎಂದು ಎಂದರು.

ಪ್ರಸಕ್ತ ಸಾಲಿನಲ್ಲಿ ಒಟ್ಟಾರೆ 19 ಸಾವಿರ ಹೆಕ್ಟೇರ್ ಭೂಮಿಯಲ್ಲಿ ಬಿತ್ತನೆಯಾಗಿದ್ದು, ಮಳೆ ಕೊರತೆಯಿಂದ ಒಣಗುವ ಸ್ಥಿತಿಯಲ್ಲಿದೆ. ಬರುವ ದಿನಗಳಲ್ಲಿ ಜಾನುವಾರು ಗಳಿಗೆ ನೀರು ಪೂರೈಕೆ ಅಗತ್ಯವು ಬರಬಹುದು. ಜಲಾನಯನ ಪ್ರದೇಶಾಭಿವೃದ್ಧಿ ಇಲಾಖೆ ಪರಿಸ್ಥಿತಿ ಅವಲೋಕಿಸಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದರು.

ಬೆಳೆ ಸ್ಥಿತಿ ಕುರಿತು ಮಾಹಿತಿ ನೀಡಿದ ಜಂಟಿ ಕೃಷಿ ನಿರ್ದೇಶಕ ಸಂಗಯ್ಯ ಅವರು, ಜಿಲ್ಲೆಯಲ್ಲಿ 19 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿದೆ. ರಾಗಿ, ಜೋಳ ಬೆಳೆ ಇದ್ದು, ನೀರಿನ ಕೊರತೆ ಇದೆ. ಭತ್ತದ ನಾಟಿ ಕಾರ್ಯವು ನಡೆಯುತ್ತಿದೆ ಎಂದರು.

ಕೃಷಿ ಚಟುವಟಿಕೆಗೆ ಅಗತ್ಯವಿರುವ ರಸಗೊಬ್ಬರ ದಾಸ್ತಾನು ಇದ್ದು, ಸಮಸ್ಯೆ ಇಲ್ಲ ಎಂದು ಸಭೆಗೆ ಮಾಹಿತಿ ನೀಡಿದರು.

ಸ್ಥಾಯಿ ಸಮಿತಿ ಅಧ್ಯಕ್ಷ ಮಂಚೇಗೌಡ ಅವರು, ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಬೇಸಾಯವೇ ಆರಂಭವಾಗಿಲ್ಲ. ನಾಗಮಂಗಲ, ಮೇಲುಕೋಟೆ, ಮಳವಳ್ಳಿಯ ಭಾಗಗಳಲ್ಲಿ ಬಿತ್ತನೆ ಆಗಿರುವ ಬೆಳೆಗಲು ಒಣಗುವ ಹಂತದಲ್ಲಿದ್ದು, ಇಲಾಖೆಯ ಅಧಿಕಾರಿಗಳು ಅತ್ತ ಗಮನಿಸಬೇಕು ಎಂದರು.

ಸಿಇಒ ಜಯರಾಂ ಅವರು, ಪರಿಸ್ಥಿತಿ ಎದುರಿಸುವ ಕ್ರಮವಾಗಿ ಮಳೆಕೊರತೆ ಇರುವ ಗ್ರಾಮಗಳನ್ನು ಗ್ರಾಮ ಪಂಚಾಯಿತಿ ಪಟ್ಟಿಯನ್ನು ಸಿದ್ದಪಡಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯ್ಲಿ ಬ್ರೈಲ್ ಗ್ರಂಥಾಲಯ ತೆರೆಯಲು ಚಿಂತಿಸಿದ್ದು, ಉಪನ್ಯಾಸಕ ಅರುಣ್ಕುಮಾರ್ ನೇತೃತ್ವದಲ್ಲಿ ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.

ಹಂಪ್ಗಳ ನಿರ್ವಹಣೆಗೆ ಸಲಹೆ: ಮಂಚೇಗೌಡ ಅವರು, ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಅವೈಜ್ಞಾನಿಕ ಕ್ರಮದಲ್ಲಿ ಹಾಕಿರುವ ಹಂಪ್ಗಳನ್ನು ಸರಿಪಡಿಸಬೇಕು. ಇವುಗಳು ಚಾಲಕರ ಗಮನಕ್ಕೆ ಬರುವಂತೆ ಬಿಳಿ ಬಣ್ಣದ ಗೆರೆಗಳು, ಇಂಡಿಕೇಟರ್ಗಳನ್ನು ಅಳವಡಿಸಬೇಕು ಎಂದು ಸಲಹೆ ಮಾಡಿದು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಸುಜ್ಞಾನಮೂರ್ತಿ ಸಭೆಗೆ ಮಾಹಿತಿ ನೀಡಿ, ಎಸ್ಜೆಎಸ್ಆರ್ವೈ ಯೋಜನೆಯಡಿ ಜಿಲ್ಲೆಯಲ್ಲಿ 500 ಫಲಾನುಭವಿಗಳನ್ನು ಆಯ್ಕೆ ಮಾಡಿ ಉದ್ಯೋಗ ಆಧಾರಿತ ಕೌಶಲ್ಯ ತರಬೇತಿ ನೀಡಲಾಗಿದೆ ಎಂದರು.

ಜಿಪಂ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷೆ ಜಯಲಕ್ಷ್ಮಮ್ಮ, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಮಾದಪ್ಪ, ಇತರ ಅಧಿಕಾರಿಗಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.