ಶನಿವಾರ, ಮಾರ್ಚ್ 6, 2021
18 °C

ಬೆಳ್ತಂಗಡಿ: ಡೀಸೆಲ್‌ ಟ್ಯಾಂಕರ್ ಉರುಳಿ ಬಿದ್ದು ಬೆಂಕಿಗಾಹುತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳ್ತಂಗಡಿ: ಡೀಸೆಲ್‌ ಟ್ಯಾಂಕರ್ ಉರುಳಿ ಬಿದ್ದು ಬೆಂಕಿಗಾಹುತಿ

ಉಜಿರೆ: ಬೆಳ್ತಂಗಡಿ ಸಮೀಪದ ಲಾೈಲ ಸೇತುವೆ ಬಳಿ ಬುಧವಾರ ಸಂಜೆ ವಿದ್ಯುತ್ ಕಂಬಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದು, ಅದರಿಂದ ಎದ್ದ ಕಿಡಿಯಿಂದ ಬೆಂಕಿ ಹತ್ತಿಕೊಂಡು ಟ್ಯಾಂಕರ್‌ ಬಹುತೇಕ ಭಸ್ಮವಾದ ಘಟನೆ ನಡೆದಿದೆ.ಟ್ಯಾಂಕರ್‌ನಲ್ಲಿದ್ದ ಚಾಲಕ, ಕ್ಲೀನರ್‌ ಅಪಾಯ ಇಲ್ಲದೆ ಪಾರಾಗಿದ್ದಾರೆ.ಟ್ಯಾಂಕರ್ ಬೆಳ್ತಂಗಡಿ ಕಡೆಯಿಂದ ಚಾರ್ಮಾಡಿ ಕಡೆಗೆ ಹೋಗುತ್ತಿದ್ದಾಗ ಎದುರಿನಿಂದ ಬಂದ ಬೈಕ್ ಸವಾರನನ್ನು ತಪ್ಪಿಸಲು ಪ್ರಯತ್ನಿಸಿದಾಗ ಟ್ಯಾಂಕರ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತು. ಆಗ ಟ್ಯಾಂಕರ್‌ಗೆ ಬೆಂಕಿ ಹತ್ತಿಕೊಂಡಿತು.ಬೆಂಕಿಯಿಂದ ಸುಮಾರು ಮುಕ್ಕಾಲು ಭಾಗದಷ್ಟು ಟ್ಯಾಂಕರ್ ಸುಟ್ಟುಹೋಗಿದೆ. ಬೆಳ್ತಂಗಡಿಯಲ್ಲಿರುವ ಅಗ್ನಿಶಾಮಕ ದಳದ ಎರಡು ವಾಹನಗಳು ಹಾಗೂ ಮೂಡುಬಿದಿರೆಯ ಅಗ್ನಿಶಾಮಕ ದಳದ ಒಂದು ವಾಹನ ಮತ್ತು ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ  ತಪ್ಪಿಸುವಲ್ಲಿ ಯಶಸ್ವಿಯಾದರು. ಸಂಜೆ 4.30ರ ವೇಳೆಗೆ ಈ ಘಟನೆ ನಡೆಯಿತು. ಸುಮಾರು ಒಂದು ಗಂಟೆ ಕಾಲ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಯಿತು. ಮುಂಜಾಗ್ರತಾ ಕ್ರಮವಾಗಿ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.