ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಗ್ರಾಮ ಪಂಚಾಯಿತಿಯ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಟಿ.ಆರ್.ರವಿ ಅವಿರೋಧವಾಗಿ ಆಯ್ಕೆಯಾದರು.

ಅಧ್ಯಕ್ಷ ಸ್ಥಾನಕ್ಕೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ಟಿ.ಆರ್. ರವಿ ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್. ಮಲ್ಲಿಕಾರ್ಜುನ್ ಕಾರ್ಯ ನಿರ್ವಹಿಸಿದರು.

ತೆರಕಣಾಂಬಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಪಿ. ಮಹಾದೇವಪ್ಪ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪ್ರೇಮಾ, ಉಪಾಧ್ಯಕ್ಷೆ ಮಹಾದೇವಮ್ಮ, ಸದಸ್ಯರುಗಳಾದ ತಿರುಪತಿನಾಯಕ, ಜಲೇಂದ್ರ, ಗೋವಿಂದನಾಯಕ್, ನಂಜನಾಯಕ್, ಮಲ್ಲಪ್ಪ ಮುಂತಾದವರು ಭಾಗವಹಿಸಿದ್ದರು.

ಸಮುದಾಯ ಶಿಕ್ಷಣ ಕೇಂದ್ರ ಉದ್ಘಾಟನೆ
ತಾಲ್ಲೂಕಿನ ಉಮ್ಮತ್ತೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಈಚೆಗೆ ಮೊಬಿಲಿಟಿ ಇಂಡಿಯಾ ಸಂಸ್ಥೆಯಿಂದ ಶ್ರೀಬುದ್ಧ, ಮಕ್ಕಳ ಮಹದೇಶ್ವರ ಮತ್ತು ಭುಜಂಗೇಶ್ವರ ಅಂಗವಿಕಲರ ಸ್ವಸಹಾಯ ಸಂಘ ಹಾಗೂ ಸಮುದಾಯ ಶಿಕ್ಷಣ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾಗ್ಯಮ್ಮ ಮಾತನಾಡಿ, `ಗ್ರಾಮದ ಅಂಗವಿಕಲರು ಸಂಘಟಿತರಾಗುವ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು~ ಎಂದು ಕರೆ ನೀಡಿದರು.

ಮುಖಂಡ ಗುರುಮಲ್ಲಪ್ಪ ಮಾತನಾಡಿ, ಅಂಗವಿಕಲರಲ್ಲಿ ಅಸಾಧಾರಣ ಸಾಮರ್ಥ್ಯವಿದೆ. ಅವರ ಪ್ರತಿಭೆ ಗುರುತಿಸಿ ಪ್ರೋತ್ಸಾಹ ನೀಡಬೇಕಿದೆ ಎಂದರು.

ಸಂಸ್ಥೆಯ ಸಂಯೋಜಕ ಜಾನ್, ಕಾವೇರಿ ಕಲ್ಪತರು ಬ್ಯಾಂಕ್ ವ್ಯವಸ್ಥಾಪಕ ಗೋಪಾಲನಾಯಕ, ಕೃಷಿಪತ್ತಿನ ಸಹಕಾರ ಬ್ಯಾಂಕ್ ಅಧ್ಯಕ್ಷ ರೇವಣ್ಣ, ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ರಾಧಾ, ಶಾಲಾ ಮುಖ್ಯಶಿಕ್ಷಕ ರಾಮಚಂದ್ರರಾವ್, ಗ್ರಾ.ಪಂ. ಮಾಜಿ ಅಧ್ಯಕ್ಷೆ ಕೆಂಪರಾಜಮ್ಮ, ಮೊಬಿಲಿಟಿ ಇಂಡಿಯಾದ ಶಿಕ್ಷಣ ಸಂಯೋಜಕ ರಾಜಣ್ಣ, ಆರೋಗ್ಯ ಕಾರ್ಯಕರ್ತ ಶಿವಕುಮಾರ್, ಪ್ರೇರಕ ನಂದೀಶ್ ಇತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.