ಹೊಸದುರ್ಗ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪಟ್ಟಣದಲ್ಲಿ ಶುಕ್ರವಾರ ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.

ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಮಾಜದ ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡುತ್ತಿದೆ. ಈ ಯೋಜನೆಯಲ್ಲಿ ಕೆಲಸ ಮಾಡುವ ಸುಮಾರು 1,08,520ಕ್ಕೂ ಹೆಚ್ಚು ಅಂಗನವಾಡಿ ಕಾರ್ಯ ಕರ್ತೆಯರು ಮತ್ತು ಸಹಾಯಕಿಯರು ಫಲಾನುಭವಿಗಳಾದ ಮಕ್ಕಳ ಮತ್ತು ತಾಯಂದಿರ ಪೋಷಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಆದರೆ, ನಮ್ಮ ಬೇಡಿಕೆ ಮಾತ್ರ ಈಡೇರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೀವನಕ್ಕೆ ಬೇಕಾದ ಆಹಾರ ಧಾನ್ಯಗಳು, ಸೀಮೆಎಣ್ಣೆ, ಗ್ಯಾಸ್ ಸಿಲಿಂಡರ್, ಹಾಲಿನ ವೆಚ್ಚ, ವಿದ್ಯುತ್ ವೆಚ್ಚ, ಬಸ್ ಪ್ರಯಾಣ ದರ, ಮನೆ ಬಾಡಿಗೆ ದುಬಾರಿಯಾಗಿವೆ. ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ನೊಂದು ನುಡಿದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನದಲ್ಲಿ ಯಾವುದೇ ಬದಲಾವಣೆ ಆಗದೇ ಇರುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ ಎಂದು ದೂರಿದರು.

2ರಿಂದ 3 ದಶಕಗಳ ಕಾಲ ಸೇವೆ ಸಲ್ಲಿಸಿರುವವರಿಗೆ ಸೇವಾ ಹಿರಿತನದ ಮೇಲೆ ಪ್ರತಿ ವರ್ಷಕ್ಕೆ ರೂ 200ರಂತೆ ಒಟ್ಟು ಸಲ್ಲಿಸಿರುವ ಸೇವಾವಧಿಗೆ ಗ್ರಾಚ್ಯುಟಿ ಹಣ ಸೇರಿದಂತೆ ಇತರ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ತಹಶೀಲ್ದಾರ್ ಕೆ.ಏಕೇಶ್ ಬಾಬುಗೆ ಮನವಿ ಸಲ್ಲಿಸಿದರು.

ರಾಜ್ಯ ಅಂಗನವಾಡಿ ಎಐಟಿಸಿ ಫೆಡರೇಷನ್ ಅಧ್ಯಕ್ಷ ಎಚ್.ಕೆ.ರಾಮಚಂದ್ರಪ್ಪ ಹಾಗೂ ಸಂಚಾಲಕ ಕೆ.ಎಂ. ರಮೇಶ್ ಹಾಗೂ ತಾಲ್ಲೂಕಿನ ಅನೇಕ ಅಂಗನವಾಡಿ ಕಾರ್ಯ ಕರ್ತೆಯರು ಹಾಗೂ ಸಹಾಯಕಿಯರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.