ಶುಕ್ರವಾರ, ಆಗಸ್ಟ್ 7, 2020
23 °C

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿಯರ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇವದಾಸಿಯರ ಧರಣಿ

ಬಳ್ಳಾರಿ: ರಾಜ್ಯ ಬಜೆಟ್‌ನಲ್ಲಿ ದೇವದಾಸಿ ಮಹಿಳೆಯರನ್ನು ಕಡೆಗಣಿಸಿರುವುದನ್ನು ಖಂಡಿಸಿ, ರಾಜ್ಯ ದೇವದಾಸಿ ವಿಮೋಚನಾ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ನೂರಾರು ದೇವದಾಸಿ ಮಹಿಳೆಯರು ಇಲ್ಲಿಯ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.ಸರ್ಕಾರ ದೇವದಾಸಿ ಮಹಿಳೆಯರಿಗೆ ಪ್ರತಿ ತಿಂಗಳೂ ನೀಡುತ್ತಿರುವ ಸಹಾಯಧನವನ್ನು ಕೇವಲ ರೂ.100 ಹೆಚ್ಚಿಸುವ ಮೂಲಕ ದೇವದಾಸಿ ಮಹಿಳೆಯರ ಬೇಡಿಕೆಗಳಿಗೆ ಸರಿಯಾಗಿ ಸ್ಪಂದಿಸಿಲ್ಲ ಎಂದು ಪ್ರತಿಭಟನಕಾರರು ಆರೋಪಿಸಿದರು.ಚಿಕ್ಕ ವಯಸ್ಸಿನಲ್ಲಿಯೇ ದೇವದಾಸಿ ಎಂಬ ಅನಿಷ್ಟ ಪದ್ಧತಿಗೆ ಸಿಲುಕಿ, ಅತಂತ್ರ ಸ್ಥಿತಿಯ ಜೀವನ ನಡೆಸುತ್ತಿದ್ದು, ನಿವೇಶನ, ವಸತಿ  ಹಾಗೂ ಮೂಲಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯದಾದ್ಯಂತ ದೇವದಾಸಿ ಎಂಬ ಅನಿಷ್ಟ ಪದ್ಧತಿ ನಿರ್ಮೂಲನೆ ಮಾಡಲು, ಜಾಗೃತಿ ಮೂಡಿಸುವ ಉದ್ದೇಶದಿಂದ ಹಲವಾರು ಸಂಘಗಳನ್ನು ಕಟ್ಟಿ  ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಕಳೆದ ಹಲವಾರು ವರ್ಷಗಳಿಂದ ಹೋರಾಟ ಮಾಡಲಾಗಿದೆ.ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ತೀವ್ರ ತೊಂದರೆ ಅನುಭವಿಸುವಂತಾಗಿದ್ದು, ರಾಜ್ಯದ ಎಲ್ಲ ದೇವದಾಸಿ ಮಹಿಳೆಯರಿಗೆ ಪ್ರತಿ ತಿಂಗಳು ನೀಡುವ ಸಹಾಯಧನವನ್ನು ರೂ 1500ಕ್ಕೆ ಹೆಚ್ಚಿಸಬೇಕು ಎಂದು ಅವರು ಆಗ್ರಹಿಸಿದರು.ಸಂಘದ ರಾಜ್ಯ ಘಟಕದ ಅಧ್ಯಕ್ಷೆ ಬಿ.ಮಾಳಮ್ಮ, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಅಡಿವೆಪ್ಪ, ಕೆ.ನಾಗರತ್ನ, ಖಜಾಂಚಿ ವಿಶ್ವನಾಥ ಸ್ವಾಮಿ, ಸಾವಿತ್ರಮ್ಮ, ಎರೆಮ್ಮ, ಕಲಾವತಿ, ಕಮಲಮ್ಮ  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.