ಭಾನುವಾರ, ಏಪ್ರಿಲ್ 18, 2021
33 °C

ಬೇಡಿಕೆ ಈಡೇರಿಕೆಗೆ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಬೆಲೆ ಏರಿಕೆ ನಿಯಂತ್ರಣ, ಆಹಾರದ ಹಕ್ಕು ಖಾತ್ರಿ ಸೇರಿದಂತೆ ವಿವಿಧ ಬೇಡಿಕೆ ಒತ್ತಾಯಿಸಿ ಬುಧವಾರ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಘಟಕದ ಕಾರ್ಯಕರ್ತರು ಅಂಚೆ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು. ರಾಷ್ಟ್ರವ್ಯಾಪಿ ಮಹಿಳೆಯರ ಜೈಲ ಬರೋ ಕಾರ್ಯಕ್ರಮ ಹಮ್ಮಿಕೊಂಡಿದ್ದ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರದಲ್ಲಿ ಜನವಾದಿ ಮಹಿಳಾ ಸಂಘಟನಾ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದರು.ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಅಂಚೆ ಕಚೇರಿ ಎದುರು ಧರಣಿ ನಡೆಸಿದರು. ಕಚೇರಿ ವ್ಯವಹಾರ ಸುಮಾರು ಎರಡು ಗಂಟೆಗಳ ಕಾಲ ಸ್ಥಗಿತಗೊಂಡಿತ್ತು. ಭಾರತದಲ್ಲಿ ಕೋಟ್ಯಂತರ ಜನರು ಹಸಿವಿನಿಂದ ಸಾಯುತ್ತಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕಾಳಜಿ ಇಲ್ಲ ಎಂದು ಕಾರ್ಯಕರ್ತರು ಆರೋಪಿಸಿದರು. ದೇಶದಲ್ಲಿ ಅಪೌಷ್ಟಿಕತೆಯಿಂದ ಶೇ.48 ರಷ್ಟು ಮಕ್ಕಳು ಮರಣವನ್ನುಪ್ಪುತ್ತಿದ್ದಾರೆ. ರಾಜ್ಯದಲ್ಲಿ ಶೇ.41 ರಷ್ಟು ಇದೆ.  ಪ್ರತಿ ಸಾವಿರ ನವಜಾತ ಶಿಶುಗಳ ಪೈಕಿ ಶೇ.57ರಷ್ಟು ಮಕ್ಕಳು ಮರಣ ಹೊಂದುತ್ತಿದ್ದಾರೆ ಎಂದು ಕಿಡಿಕಾರಿದರು.ಕಾಳಸಂತೆ ವ್ಯವಸ್ಥೆಯ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದರ ಜತೆ  ಉದ್ಯೋಗ ಖಾತ್ರಿಯ ಯೋಜನೆಯನ್ನು ನಗರ ಪ್ರದೇಶಗಳಿಗೂ ವಿಸ್ತರಿಸಬೇಕು ಎಂದು ಆಗ್ರಹ ಪಡಿಸಿದರು. ಮುಕ್ತ ರಪ್ತು ನೀತಿಯನ್ನು ರದ್ದು ಪಡಿಸಬೇಕು ಎಂದು ಒತ್ತಾಯಿಸಿದರು. ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷೆ ಫಾತಿಮಾ ಬೀ, ಕಾರ್ಯದರ್ಶಿ ಮಧುಲತಾ, ಮುಖಂಡರಾದ ರತ್ನ, ಜೈನುಬೀ, ಪವಿತ್ರ, ಶಾರದ, ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಬಿ.ಎನ್.ಮುನಿಕೃಷ್ಣಪ್ಪ ಮತ್ತಿತರರು ಈ ಸಂದರ್ಭದಲ್ಲಿ  ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.