ಕೃಷ್ಣರಾಜಪುರ : ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ (ಬಿಇಒ) ಶಿಕ್ಷಕರಿಗೆ ಸೌಲಭ್ಯ ಒದಗಿಸುವಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂಬುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕು ಪ್ರಾಥಮಿಕ ಸಂಘದ ಅಧ್ಯಕ್ಷ ಎ.ಸಿ.ಹರಿಪ್ರಸಾದ್ ಅವರು ಕ್ಷೇತ್ರ ಶಿಕ್ಷಣಾಧಿಕಾರಿ ನಂಜುಂಡಯ್ಯ ಅವರಿಗೆ ಮನವಿ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಶಿಕ್ಷಕರ ವೈದ್ಯಕೀಯ ವೆಚ್ಚ ಮರುಪಾವತಿ ವಿತರಣೆಯಲ್ಲಿ ವಿಳಂಬವಾಗುತ್ತಿದ್ದು, ಪ್ರತಿಭಾಕಾರಂಜಿ ಮುಂತಾದ ಚಟುವಟಿಕೆಗಳ ಅಳವಡಿಕೆಯಲ್ಲಿ ಇಲಾಖಾ ಮಾರ್ಗಸೂಚಿಯನ್ನು ಕಡೆಗಣಿಸಲಾಗಿದೆ ಎಂದು ಆರೋಪಿಸಿದರು.

ಶಿಕ್ಷಕರನ್ನು ಇತರೆ ಕೆಲಸಗಳಿಗೆ ನಿಯೋಜಿಸುವುದರಿಂದ ಪಾಠಪ್ರವಚನಗಳಿಗೆ ತೊಂದರೆಯಾಗುತ್ತಿದೆ. ಕ್ರೀಡಾಚಟುವಟಿಕೆಗಳು, ಶಿಕ್ಷಕ ದಿನಾಚರಣೆ, ಪ್ರಶಸ್ತಿ ಸಮಿತಿಗಳ ರಚನೆಯಲ್ಲಿ ಸಂಘದ ಪದಾಧಿಕಾರಿಗಳ ಸಹಭಾಗಿತ್ವವನ್ನು ಕಡೆಗಣಿಸಲಾಗಿದೆ. ಸಂಘವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇಲಾಖಾ ಕಾರ್ಯಕ್ರಮಗಳನ್ನು ನಡೆಸಲು ಶಿಕ್ಷಣಾಧಿಕಾರಿಗಳು ಸಹಕರಿಸಬೇಕು' ಎಂದು ಅವರು ಕೋರಿದರು.
ಸಂಘದ ಪ್ರಧಾನ ಕಾರ್ಯದರ್ಶಿ ಎನ್.ವೆಂಕಟಪ್ಪ, ಸಹಕಾರ್ಯದರ್ಶಿ ಎ.ಎಂ.ಉಶಾರಾಣಿ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.