ನವದೆಹಲಿ (ಪಿಟಿಐ): ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಬಿಎಸ್ಪಿ ಜತೆ ಚುನಾವಣೋತ್ತರ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಕೇಂದ್ರ ಸಚಿವ ಬೇಣಿ ಪ್ರಸಾದ್ ವರ್ಮ ಅವರ ಹೇಳಿಕೆಯಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ.

`ಇದು ವರ್ಮ ಅವರ ವೈಯಕ್ತಿಕ ಅನಿಸಿಕೆ. ಫಲಿತಾಂಶದ ಬಳಿಕ ಎಲ್ಲ ನಿಟ್ಟಿನಿಂದಲೂ ಯೋಚಿಸಿ ಪಕ್ಷದ ಹೈಕಮಾಂಡ್ನಿಂದ ಈ ಕುರಿತು ಅಂತಿಮ ನಿರ್ಧಾರ ಹೊರಬೀಳಲಿದೆ~ ಎಂದು ಕಾಂಗ್ರೆಸ್ ವಕ್ತಾರ ರಶೀದ್ ಅಲ್ವಿ ಹೇಳಿದ್ದಾರೆ.

ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದೆ ಎಂಬ ಮತಗಟ್ಟೆ ಸಮೀಕ್ಷೆ ಹಿನ್ನೆಲೆಯಲ್ಲಿ ವರ್ಮ ಈ ಹೇಳಿಕೆ ನೀಡಿದ್ದರು. ವರ್ಮ ಅನಿಸಿಕೆಯನ್ನು ಉ. ಪ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಪ್ರಮೋದ್ ತಿವಾರಿ ಕೂಡ ತಳ್ಳಿಹಾಕಿದ್ದರು. ಈ ನಡುವೆ, ಕಾಂಗ್ರೆಸ್ ಮುಖಂಡರೊಬ್ಬರು ಬಿಎಸ್ಪಿ ಜತೆ ಮೈತ್ರಿ ಸಾಧ್ಯತೆಯನ್ನು ನಿರಾಕರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.