ಗುರುವಾರ , ನವೆಂಬರ್ 21, 2019
22 °C

ಬೇನಿ ವಿರುದ್ಧ ಕ್ರಮ ಕಾಂಗ್ರೆಸ್ ಮೀನಮೇಶ

Published:
Updated:

ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಅವರಿಗೆ ಉಗ್ರರ ನಂಟಿದೆ ಎಂಬ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಒಳಗಾಗಿರುವ ಕೇಂದ್ರ ಸಚಿವ ಬೇನಿ ಪ್ರಸಾದ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಮೀನಮೇಷ ಎಣಿಸುತ್ತಿದೆ.ಕಾಂಗ್ರೆಸ್‌ನಲ್ಲಿರುವ ಕೆಲವು ನಾಯಕರು `ಬೇನಿ ಪ್ರಸಾದ್ ಅವರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಉತ್ತರ ಪ್ರದೇಶದಲ್ಲಿ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದು,  ಇದಕ್ಕಾಗಿ ಸಮಾಜವಾದಿ ಪಕ್ಷದ ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.

 

 

ಪ್ರತಿಕ್ರಿಯಿಸಿ (+)