ಭಾನುವಾರ, ಮೇ 9, 2021
26 °C

ಬೇಲೂರು: ನಗರಸಭೆ ಅಧ್ಯಕ್ಷ ಭೇಟಿ, ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೇಲೂರು: ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಚಿಕ್ಕಮಗಳೂರು ಹಾಗೂ ಬೇಲೂರು ಪಟ್ಟಣಕ್ಕೆ ನೀರು ಪೂರೈಕೆ ಮಾಡುವ  ಯಗಚಿ ಜಲಾಶಯದ ಬಳಿಯ ಜಾಕ್‌ವೆಲ್ ಬಳಿ ವಿದ್ಯುತ್ ಕಂಬಗಳು ತುಂಡಾಗಿರುವ ಸ್ಥಳಕ್ಕೆ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸಿ.ಆರ್.ಪ್ರೇಮ್‌ಕುಮಾರ್ ಭಾನುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಳೆಗೆ ಕಂಬಗಳು ತುಂಡಾಗಿರುವುದರಿಂದ ಚಿಕ್ಕಮಗಳೂರು ಹಾಗೂ ಬೇಲೂರು ಪಟ್ಟಣಕ್ಕೆ ಎರಡು ದಿನಗಳಿಂದ ನೀರು ಪೂರೈಕೆ ಸ್ಥಗಿತಗೊಂಡಿದೆ. ಭಾರಿ ಮಳೆ ಹಾಗೂ ಗಾಳಿಗೆ ಜಾಕ್‌ವೆಲ್‌ಗೆ ವಿದ್ಯುತ್ ಪೂರೈಕೆ ಮಾಡುವ ಐದು ವಿದ್ಯುತ್ ಕಂಬಗಳು ಮತ್ತು ತಂತಿಗಳು ತುಂಡಾಗಿ ಬಿದ್ದಿವೆ. ಚಾಮುಂಡೇಶ್ವರಿ ವಿದ್ಯುತ್ ಕಂಪೆನಿಯ ಸಿಬ್ಬಂದಿ ಮತ್ತು ಪುರಸಭೆಯ ಸಿಬ್ಬಂದಿ ಹೊಸ ಕಂಬಗಳನ್ನು ಅಳವಡಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಭಾನುವಾರ ಸಂಜೆಯ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ಸಾಧ್ಯತೆಯಿದೆ.ಜಾಕ್‌ವೆಲ್ ಬಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ `ಪ್ರಜಾವಾಣಿ~ಯೊಂದಿಗೆ ಮಾತನಾಡಿದ ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸಿ.ಆರ್.ಪ್ರೇಮ್‌ಕುಮಾರ್, ಯಗಚಿ ಜಲಾಶಯದಿಂದ ಚಿಕ್ಕಮಗಳೂರು ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ.

 

ಭಾರಿ ಮಳೆ, ಗಾಳಿ ಬರುವ ಸಂದರ್ಭದಲ್ಲಿ ವಿದ್ಯುತ್ ಕಂಬಗಳು ತುಂಡಾಗಿ ಬೀಳುತ್ತಿರುವುದು ಸಾಮಾನ್ಯವಾಗಿದೆ. ಇದರಿಂದ ಕುಡಿಯುವ ನೀರು ಪೂರೈಕೆ ಮಾಡಲು ಅಡ್ಡಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಾಕ್‌ವೆಲ್ ಬಳಿಗೆ ಭೂಗತ ಕೇಬಲ್ ಅಳವಡಿಸಲು ಉದ್ದೇಶಿಸಲಾಗಿದೆ.

 

ಬೇಲೂರು ಪುರಸಭೆ ಹಾಗೂ ಚಿಕ್ಕಮಗಳೂರು ನಗರಸಭೆ ಜಂಟಿಯಾಗಿ ಈ ಯೋಜನೆ ರೂಪಿಸುವ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದರು. ಬೇಲೂರು ಪುರಸಭೆ ಅಧ್ಯಕ್ಷ ತೊ.ಚ.ಅನಂತಸುಬ್ಬರಾಯ, ನಗರಸಭಾ ಸದಸ್ಯ ಸಿ.ಆರ್.ಪ್ರೇಮ್‌ಕುಮಾರ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.