ಬೇವಿನಹಳ್ಳಿ: ಗಾಂಧೀಜಿ, ಶಾಸ್ತ್ರಿ ಜನ್ಮದಿನಾಚರಣೆ

7

ಬೇವಿನಹಳ್ಳಿ: ಗಾಂಧೀಜಿ, ಶಾಸ್ತ್ರಿ ಜನ್ಮದಿನಾಚರಣೆ

Published:
Updated:

ಮುನಿರಾಬಾದ್:  ಇಲ್ಲಿಗೆ ಸಮೀಪದ ಬೇವಿನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಗಾಂಧೀಜಿ ಮತ್ತು ಲಾಲ್‌ಬಹಾದ್ದೂರ ಶಾಸ್ತ್ರಿ ಜನ್ಮದಿನಾಚರಣೆ ಮತ್ತು ವಿದ್ಯಾರ್ಥಿಗಳಿಗೆ ಉಚಿತ ಸೈಕಲ್ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಇಬ್ಬರು ನಾಯಕರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ರಾಘವೇಂದ್ರ, ಗ್ರಾಮೀಣ ಪ್ರದೇಶದಲ್ಲಿ ಬಡತನ ಸಾಮಾನ್ಯ. ಆ ಪರಿಸ್ಥಿತಿಯನ್ನು ಮುಂದೊಡ್ಡಿ ಪಾಲಕರು ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡಬಾರದು. ಸರ್ಕಾರ ಶಿಕ್ಷಣಕ್ಕೆ ಆದ್ಯತೆಯನ್ನು ನೀಡುತ್ತಿದ್ದು ಸೌಲಭ್ಯಗಳನ್ನು ಬಳಸಿಕೊಂಡು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು ಎಂದರು.ಎಸ್‌ಡಿಎಂಸಿ ಮತ್ತು ಗ್ರಾಮಸ್ಥರು ಶಾಲಾವರಣದಲ್ಲಿ ಗಾರ್ಡನ್(ಉದ್ಯಾನ) ನಿರ್ಮಿಸಲು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯಿತಿ ಅನುದಾನದ ಒಂದು ಲಕ್ಷ ವೆಚ್ಚದಲ್ಲಿ ಉದ್ಯಾನ ನಿರ್ಮಿಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದರು.ವಲಯ ಸಂಪನ್ಮೂಲ ವ್ಯಕ್ತಿ ಉಮೇಶ ಸುರ್ವೆ ಮಾತನಾಡಿ, ಅಹಿಂಸಾತ್ಮಕ ಹೋರಾಟದಿಂದ ಬ್ರಿಟೀಷರನ್ನು ಮಣಿಸಿದ ಗಾಂಧೀಜಿ, ಪ್ರಾಮಾಣಿಕ ಮತ್ತು ಸರಳ ಜೀವನಕ್ಕೆ ಹೆಸರಾಗಿದ್ದ ಮಾಜಿ ಪ್ರಧಾನಿ ಲಾಲ್‌ಬಹಾದ್ದೂರ ಶಾಸ್ತ್ರಿ ಅನುಕರಣೀಯರು. ಇದೇ ಶಾಲೆಯ ವಿದ್ಯಾರ್ಥಿ ಮಂಜುನಾಥ ಕ್ರೀಡಾಕೂಟದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುವುದು ಅಭಿಮಾನದ ಸಂಗತಿ ಎಂದರು. ಪ್ರೌಢಶಾಲೆಯ ಮುಖ್ಯಗುರು ಬಿ.ಫಣಿರಾಜ್ ಗಾಂಧೀಜಿ ಮತ್ತು ಶಾಸ್ತ್ರಿ ಕುರಿತು ಮಾತನಾಡಿದರು.ಇದೇ ಸಂದರ್ಭದಲ್ಲಿ ನೂತನ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕೆ.ರಾಘವೇಂದ್ರ, ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಾಲೆಯ ಮುಖ್ಯಗುರು ಮಾರುತಿ ಆರೇರ, ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮಣ್ಣ ಮೂಲಿಮನಿ, ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿರುವ ಶಾಲೆಯ ವೀರಾಗ್ರಣಿ ಮಂಜುನಾಥ ಬಾದರಬಂಡಿ ಅವರನ್ನು ಸನ್ಮಾನಿಸಲಾಯಿತು. ಎಸ್‌ಡಿಎಂಸಿ ಅಧ್ಯಕ್ಷ ಚಿದಾನಂದಪ್ಪ ಮಡ್ಡಿ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಗ್ರಾಮ ಪಂಚಾಯಿತಿ ಸದಸ್ಯರಾದ ಬಸವರಾಜ ಪಂಪಣ್ಣ, ಮಂಜುನಾಥ ಅಡಗಿ, ಮಾಜಿ ಸದಸ್ಯರಾದ ಮಾರ್ಕಂಡಪ್ಪ, ಕೃಷ್ಣಪ್ಪ, ಎಸ್‌ಡಿಎಂಸಿ ಸದಸ್ಯರಾದ ಮೌಲಾಸಾಬ್, ಶಿಕ್ಷಕರ ಸಂಘದ ನಿರ್ದೇಶಕ ರಾಮಣ್ಣ ಮಜ್ಜಿಗಿ, ಪ್ರಮುಖರಾದ ಬೆಳ್ಳೆಪ್ಪಮಡ್ಡಿ, ಮೈಲಾರಪ್ಪ, ಶಿವಮೂರ್ತಿ, ಆರ್.ಬೆಳ್ಳೆಪ್ಪ, ಹನುಮಪ್ಪ, ಬೆಳ್ಳೆಪ್ಪಪೂಜಾರ್, ಶಂಕ್ರಪ್ಪಮಡ್ಡಿ, ಮಂಜಪ್ಪ, ನಿಂಗಜ್ಜ, ಹನುಮಪ್ಪ ಇತರರು ಇದ್ದರು. ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮುದ್ದಪ್ಪ ನಿರ್ವಹಿಸಿದರು.

 

ಗುರುರಾಜ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry