ಸೋಮವಾರ, ಮೇ 17, 2021
25 °C

ಬೇಸತ್ತ ಜನರಿಂದ ಜೆಸ್ಕಾಂಗೆ ಮುತ್ತಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾನ್ವಿ: ಪಟ್ಟಣದ 23ನೇ ವಾರ್ಡ್‌ನ ಕೊಳಚೆ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆ ವಿರೋಧಿಸಿ ನಾಗರಿಕರು ಶನಿವಾರ ಜೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟಸಿದರು.ವಿದ್ಯುತ್ ಪರಿವರ್ತಕ ಕೆಟ್ಟು ಕಳೆದ ಒಂದು ತಿಂಗಳಿಂದ ಸದರಿ ಪ್ರದೇಶಕ್ಕೆ ವಿದ್ಯುತ್ ಸರಬರಾಜು ಆಗುತ್ತಿಲ್ಲ. ಬಹುತೇಕ ಬಡವರು, ಕೂಲಿ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಾಗಿರುವ ಈ ಪ್ರದೇಶದಲ್ಲಿ ವಿದ್ಯುತ್ ಸರಬರಾಜು ಇಲ್ಲದೆ  ನಿವಾಸಿಗಳು ಪರದಾಡುವಂತಾಗಿದೆ.  ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಪುರಸಭೆ ಸದಸ್ಯರು ಹಾಗೂ ಶಾಸಕರು ಜೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ನಿರ್ಲಕ್ಷ್ಯವಹಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಜಸ್ಕಾಂ ಎಇಇ ಶಂಕರ, ಸೋಮವಾರದ ಒಳಗೆ ವಿದ್ಯುತ್ ಪರಿವರ್ತಕ ದುರಸ್ತಿಗೊಳಿಸಿ ವಿದ್ಯುತ್ ಸರಬರಾಜಿಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂದಕ್ಕೆ ಪಡೆಯಲಾಯಿತು.ಪುರಸಭೆ ಮಾಜಿ ಅಧ್ಯಕ್ಷ ಡಿ.ರಾಮಕೃಷ್ಣ, ಜೆಡಿಎಸ್ ತಾಲ್ಲೂಕು ಯುವ ಅಧ್ಯಕ್ಷ ಜೆ.ಎಚ್.ದೇವರಾಜ, ಯುವ ಮುಖಂಡರಾದ ಎನ್.ಗುರುರಾಜ್ ನಾಗಲಾಪುರ, ಬಸವರಾಜ ನಿಲೋಗಲ್ಕರ್, ರಾಮು, ಹುಲಗಪ್ಪ ಮತ್ತಿತರರು  ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.