ಬೈಕ್‌ಗಳ ನಡುವೆ ಡಿಕ್ಕಿ: ಯುವಕ ಸಾವು

7

ಬೈಕ್‌ಗಳ ನಡುವೆ ಡಿಕ್ಕಿ: ಯುವಕ ಸಾವು

Published:
Updated:

ಬೆಂಗಳೂರು: ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಭಾನುವಾರ ರಾತ್ರಿ ಬೈಕ್‌ಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದು, ಮೂರು ಮಂದಿ ಗಾಯಗೊಂಡಿದ್ದಾರೆ.ಪೀಣ್ಯ ದಾಸರಹಳ್ಳಿಯ ವೇಣುಗೋಪಾಲ್ (26) ಸಾವನ್ನಪ್ಪಿದವರು. ರಾಜಗೋಪಾಲನಗರದಲ್ಲಿನ ಪೀಠೋಪಕರಣ ಮಳಿಗೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಸ್ನೇಹಿತ ಸುನಿಲ್‌ಕುಮಾರ್ ಜತೆ ಬೈಕ್‌ನಲ್ಲಿ ಮನೆಗೆ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಪಾನಮತ್ತರಾಗಿ ಬೈಕ್ ಚಾಲನೆ ಮಾಡುತ್ತಿದ್ದ ವೇಣುಗೋಪಾಲ್, ಮುಖ್ಯರಸ್ತೆಗೆ ತಿರುವು ಪಡೆದು  ಕೊಳ್ಳುವ ಯತ್ನದಲ್ಲಿದ್ದಾಗ ಅದೇ ಮಾರ್ಗವಾಗಿ ಬಂದ ವೆಂಕಟೇಶ್ ಎಂಬುವರ ಬೈಕ್‌ಗೆ ವಾಹನ ಗುದ್ದಿಸಿದ್ದಾರೆ.  ನಂತರ ಅವರ ಬೈಕ್ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಅಸ್ವಸ್ಥಗೊಂಡ ವೇಣುಗೋಪಾಲ್ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು.

ಆದರೆ, ಚಿಕಿತ್ಸೆಗೆ ಸ್ಪಂದಿಸದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.ಘಟನೆಯಲ್ಲಿ ಸುನಿಲ್‌ಕುಮಾರ್, ವೆಂಕಟೇಶ್ ಮತ್ತು ಅವರ ಸ್ನೇಹಿತ ಪ್ರಶಾಂತ್ ಎಂಬುವರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ಕೊಡಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ. ಪೀಣ್ಯ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ

ರಾಜಾಜಿನಗರ ಸಮೀಪದ ಭುವನೇಶ್ವರಿನಗರ ನಿವಾಸಿ ಶ್ರೀನಿವಾಸ್ (40) ಎಂಬುವರು ಸೋಮವಾರ ನಸುಕಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಪತ್ನಿ ಭಾಗ್ಯ ಮತ್ತು ಮಗಳ ಜತೆ ಭುವನೇಶ್ವರಿನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಅವರು, ರಾಜಾಜಿನಗರ ಮೂರನೇ ಹಂತದಲ್ಲಿ ಹಣ್ಣಿನ ವ್ಯಾಪಾರ ಮಾಡುತ್ತಿದ್ದರು.

ಭಾನುವಾರ ರಾತ್ರಿ ವ್ಯಾಪಾರ ಮುಗಿಸಿಕೊಂಡು ಮನೆಗೆ ಬಂದಿದ್ದ ಶ್ರೀನಿವಾಸ್‌ಸ್ನೇಹಿತರನ್ನು ಭೇಟಿ ಮಾಡಿ ಬರುವುದಾಗಿ ಕುಟುಂಬ ಸದಸ್ಯರಿಗೆ ತಿಳಿಸಿ ಮನೆಯಿಂದ ಹೊರ ಹೋಗಿದ್ದರು. ಬಳಿಕ ಅವರು ಅಂಗಡಿಗೆ ಬಂದು ಅಲ್ಲಿಯೇ ಬೆಳಗಿನ ಜಾವ ನೇಣು ಹಾಕಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ರಾಜಾಜಿನಗರ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry