ಭಾನುವಾರ, ಮೇ 16, 2021
23 °C

ಬೈಕ್‌ಗೆ ಕಾರು ಡಿಕ್ಕಿ: ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಳ್ಳೇಗಾಲ: ತಮಿಳುನಾಡಿನ ಕಾರು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಪಾರಾಗಿರುವ ಘಟನೆ ತಾಲ್ಲೂಕಿನ ಜಲ್ಲಿಪಾಳ್ಯ ಗ್ರಾಮದ ಬಳಿ ಶುಕ್ರವಾರ ನಡೆದಿದೆ.ಜಲ್ಲಿಪಾಳ್ಯ ಗ್ರಾಮದ ನಿವಾಸಿ ಪಳನಿಸ್ವಾಮಿ (45) ಮೃತಪಟ್ಟ ವ್ಯಕ್ತಿ. ಮೃತ ಪಳನಿಸ್ವಾಮಿ ಜಲ್ಲಿಪಾಳ್ಯದಿಂದ ಹೂಗ್ಯಂ ಗ್ರಾಮಕ್ಕೆ ಬೈಕ್‌ನಲ್ಲಿ ಸಂಬಂಧಿ ಕಾರ್ತಿಕ್(25) ಜತೆ  ತೆರಳುತ್ತಿದ್ದಾಗ ಎದುರಿನಿಂದ ಬಂದ ತಮಿಳುನಾಡಿನ ಕಾರು ಡಿಕ್ಕಿ ಹೊಡೆಯಿತು. ಪರಿಣಾಮ ಬೈಕ್ ಸವಾರಿ ಮಾಡುತ್ತಿದ್ದ ಪಳನಿಸ್ವಾಮಿ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟರು. ಹಿಂಬದಿಯಲ್ಲಿ ಕುಳಿತಿದ್ದ ಕಾರ್ತಿಕ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾರಿನ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ರಾಮಾಪುರ ಪೊಲೀಸರು ಈ ಸಂಬಂಧ ದೂರು ದಾಖಲಿಸಿಕೊಂಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.