ಬೈಕ್ ಡಿಕ್ಕಿ: ಪಾದಚಾರಿ ಸಾವು
ಬೆಂಗಳೂರು: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಸಾವನ್ನಪ್ಪಿದ ಘಟನೆ ನಗರದ ಬಳ್ಳಾರಿ ರಸ್ತೆಯ ಸಶಸ್ತ್ರ ಪೊಲೀಸ್ ತರಬೇತಿ ಶಾಲೆ ಬಳಿ ಶನಿವಾರ ರಾತ್ರಿ ನಡೆದಿದೆ.
ಯಲಹಂಕ ಸಮೀಪದ ವಿನಾಯಕನಗರ ನಿವಾಸಿ ಕಟವಯ್ಯ (55) ಮೃತಪಟ್ಟವರು. ಅವರು ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ ಗುಮಾಸ್ತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ ಎಂಟು ಗಂಟೆ ಸುಮಾರಿಗೆ ಮನೆಗೆ ಬರುತ್ತಿದ್ದ ಅವರು ಎಪಿಟಿಎಸ್ ಬಳಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಬೈಕ್ ಸವಾರ ನಿಯಂತ್ರಣ ತಪ್ಪಿ ಅವರಿಗೆ ವಾಹನ ಗುದ್ದಿಸಿದ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.