ಬೋಜೇಗೌಡ ಜೆಡಿಎಸ್ ಅಭ್ಯರ್ಥಿ?

7

ಬೋಜೇಗೌಡ ಜೆಡಿಎಸ್ ಅಭ್ಯರ್ಥಿ?

Published:
Updated:

ಬೆಂಗಳೂರು: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಎಸ್.ಎಲ್.ಬೋಜೇಗೌಡ ಅವರನ್ನು ಕಣಕ್ಕೆ ಇಳಿಸುವುದು ಬಹುತೇಕ ಖಚಿತವಾಗಿದೆ.ಪಕ್ಷದ ಯುವ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿದ ಹಿನ್ನೆಲೆಯಲ್ಲಿ ಈ ಹೆಸರನ್ನು ಅಂತಿಮಗೊಳಿಸಲು ನಿರ್ಧರಿಸಲಾಗಿದೆ ಎನ್ನಲಾಗಿದೆ.ಈ ಕುರಿತು ಚರ್ಚಿಸಲು ಭಾನುವಾರ ಹೊಳೆನರಸೀಪುರದಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪಕ್ಷದ ಪ್ರಮುಖರ ಸಭೆ ಕರೆಯಲಾಗಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಈ ಸಭೆಯಲ್ಲಿ ಹಾಜರಿದ್ದು, ಅಭ್ಯರ್ಥಿಯ ಹೆಸರನ್ನು ಅಂತಿಮಗೊಳಿಸಲಿದ್ದಾರೆ ಎಂದು ಪಕ್ಷದ ವಕ್ತಾರ ವೈ.ಎಸ್. ವಿ.ದತ್ತ `ಪ್ರಜಾವಾಣಿ~ಗೆ ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry