ಬೋಧಕ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆಗೆ ಯುಜಿಸಿ ಪ್ರಸ್ತಾವ

7

ಬೋಧಕ ಅಭಿವೃದ್ಧಿ ಕೇಂದ್ರಗಳ ಸ್ಥಾಪನೆಗೆ ಯುಜಿಸಿ ಪ್ರಸ್ತಾವ

Published:
Updated:

ನವದೆಹಲಿ: ವಿಶ್ವವಿದ್ಯಾಲಯ ಧನಸಹಾಯ ಆಯೋಗವು 12ನೇ ಪಂಚವಾರ್ಷಿಕ ಯೋಜನೆಯಡಿ, ಆಯ್ದ ವಿಶ್ವವಿದ್ಯಾಲಯಗಳಲ್ಲಿ ಕನಿಷ್ಠ 20 ಬೋಧಕ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸುವ ಪ್ರಸ್ತಾವ ಮುಂದಿಟ್ಟಿದೆ.ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಬೋಧನಾ ಗುಣಮಟ್ಟ ಸುಧಾರಣೆಗಾಗಿ ಸ್ಥಾಪನೆಯಾಗಲಿರುವ ಈ ಕೇಂದ್ರಗಳು ಶಿಸ್ತುಬದ್ಧ ಪುನಶ್ಚೇತನ ಕಾರ್ಯಕ್ರಮಗಳು, ಮಾಹಿತಿ ಮತ್ತು ಸಂವಹನ ತಂತ್ರಜ್ಞಾನವನ್ನು ಒಳಗೊಂಡ ಬೋಧನೆ- ಕಲಿಕೆ ಸಂಶೋಧನಾ ತರಬೇತಿಯನ್ನು ನೀಡಲಿವೆ.ಮೂಲ ಸೌಕರ್ಯ, ಹಳೆಯ ದಾಖಲೆಗಳು ಹಾಗೂ ಶೈಕ್ಷಣಿಕ ಸಾಮರ್ಥ್ಯವನ್ನು ಪರಿಗಣಿಸಿ ಈ ಕೇಂದ್ರಗಳ ಸ್ಥಾಪನೆಗೆ ವಿಶ್ವವಿದ್ಯಾಲಯಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯಕ್ಕೆ ಸಲ್ಲಿಸಿರುವ ಪ್ರಸ್ತಾವದಲ್ಲಿ ಹೇಳಿದೆ. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry