ಭಾನುವಾರ, ಜೂನ್ 13, 2021
25 °C
ಟೆನಿಸ್: ಅಜರೆಂಕಾಗೆ ಆಘಾತ

ಬೋಪಣ್ಣ–ಖುರೇಶಿ ಜೋಡಿಗೆ ಸೋಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್‌ (ರಾಯಿಟರ್ಸ್‌): ರೋಹನ್‌ ಬೋಪಣ್ಣ ಹಾಗೂ ಪಾಕಿಸ್ತಾನ ಐಸಾಮ್‌ ಉಲ್‌ ಹಕ್‌ ಖುರೇಶಿ ಇಲ್ಲಿ ನಡೆಯುತ್ತಿರುವ ಬಿಎನ್‌ಪಿ ಪರಿಬಾಸ್‌ ಓಪನ್‌ ಟೆನಿಸ್ ಟೂರ್ನಿಯ ಡಬಲ್ಸ್‌ನಲ್ಲಿ ಸೋಲು ಕಂಡಿದ್ದಾರೆ.ಮೊದಲ ಸುತ್ತಿನ ಪಂದ್ಯದಲ್ಲಿ ಬೋಪಣ್ಣ ಹಾಗೂ ಖುರೇಶಿ 2–6, 7–6, 6–10ರಲ್ಲಿ ಸ್ವಿಟ್ಜರ್ಲೆಂಡ್‌ನ ರೋಜರ್‌ ಫೆಡರರ್‌ ಹಾಗೂ ಸ್ಟಾನಿಸ್ಲಾಸ್‌ ವಾವ್ರಿಂಕಾ ಎದುರು ಸೋಲು ಕಂಡರು.ಆಸ್ಟ್ರೇಲಿಯಾ ಓಪನ್‌ ಟೆನಿಸ್‌ ಟೂರ್ನಿಯಲ್ಲಿ ಸ್ಪೇನ್‌ನ ರಫೆಲ್‌ ನಡಾಲ್ ಅವರನ್ನು ಮಣಿಸಿ ಚೊಚ್ಚಲ ಗ್ರ್ಯಾಂಡ್‌ಸ್ಲಾಮ್‌ ಸಿಂಗಲ್ಸ್‌ ಪ್ರಶಸ್ತಿ ಜಯಿಸಿದ್ದ ವಾವ್ರಿಂಕಾ ಆ ಬಳಿಕ ಆಡುತ್ತಿರುವ ಮೊದಲ ಟೂರ್ನಿ ಇದು. ಅವರು 19 ತಿಂಗಳ ಬಳಿಕ ಫೆಡರರ್‌ ಜೊತೆಗೂಡಿ ಡಬಲ್ಸ್‌ನಲ್ಲಿ ಆಡುತ್ತಿದ್ದಾರೆ.ಮೊದಲ ಸೆಟ್‌ನಲ್ಲಿ ಸೋಲು ಕಂಡ ಭಾರತ–ಪಾಕ್‌ ಜೋಡಿ ಎರಡನೇ ಸೆಟ್‌ನಲ್ಲಿ ತಿರುಗೇಟು ನೀಡುವಲ್ಲಿ ಯಶಸ್ವಿಯಾಯಿತು. ಆದರೆ ಸೂಪರ್‌ ಟೈಬ್ರೇಕರ್‌ನಲ್ಲಿ ಸ್ವಿಟ್ಜರ್ಲೆಂಡ್‌ ಜೋಡಿ ಅಮೋಘ ಪ್ರದರ್ಶನದ ಮೂಲಕ ಎರಡನೇ ಸುತ್ತು ಪ್ರವೇಶಿಸಿತು.ಈ ಟೂರ್ನಿಯ ಮಹಿಳೆಯರ ಸಿಂಗಲ್ಸ್‌ನಲ್ಲಿ ಅಮೆರಿಕದ ಲಾರೆನ್‌ ಡೇವಿಸ್‌ ಅಚ್ಚರಿಯ ಫಲಿತಾಂಶಕ್ಕೆ ಕಾರಣರಾದವರು. ಅವರು ಮೊದಲ ಸುತ್ತಿನ ಪಂದ್ಯದಲ್ಲಿ 6–0, 7–6ರಲ್ಲಿ ಬೆಲಾರಸ್‌ನ ವಿಕ್ಟೋರಿಯಾ ಅಜರೆಂಕಾ ಅವರಿಗೆ ಆಘಾತ ನೀಡಿದರು.ಪ್ರಶಸ್ತಿ ಗೆಲ್ಲುವ ನೆಚ್ಚಿನ ಸ್ಪರ್ಧಿಗಳಲ್ಲಿ ಒಬ್ಬರೆನಿಸಿದ್ದ ಅಜರೆಂಕಾ  ಈ ರೀತಿಯ ಆಘಾತ ನಿರೀಕ್ಷಿಸಿರಲಿಲ್ಲ ಮತ್ತೊಂದು ಪಂದ್ಯದಲ್ಲಿ ಅಗ್ನಿಸ್ಕಾ ರಾಡ್ವಾಂಸ್ಕಾ 6–4, 6–3ರಲ್ಲಿ ಬ್ರಿಟನ್‌ನ ಹೀದರ್‌ ವಾಟ್ಸನ್‌ ಎದುರು ಗೆದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.