ಬೀದರ್: ವಿವಿಧ ಇಲಾಖೆಗಳಲ್ಲಿ ಗಂಗಾ ಕಲ್ಯಾಣ ಯೋಜನೆ ಅಡಿ ಕೊರೆಯಲಾಗಿರುವ ಬೋರವೆಲ್ಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕುಶಾಲ ಪಾಟೀಲ್ ಗಾದಗಿ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ನಡೆದ ಕರ್ನಾಟಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡ ಅಭಿವೃದ್ಧಿ ನಿಗಮದ ಅಡಿ ಕಳೆದ ವರ್ಷ ಕೊರೆಯಲಾಗಿರುವ ಬೋರವೆಲ್ಗಳ ಪೈಕಿ 544 ಬೋರವೆಲ್ಗಳಿಗೆ ಈವರೆಗೆ ವಿದ್ಯುತ್ ಸಂಪರ್ಕ ಒದಗಿಸಿಲ್ಲ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ 251 ಬೋರವೆಲ್ಗಳಿಗೆ ವಿದ್ಯುತ್ ಸಂಪರ್ಕ ಬಾಕಿ ಇದೆ. ಡಿಸೆಂಬರ್ ಒಳಗಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ವಿದ್ಯುತ್ ಸಂಪರ್ಕ ಕಲ್ಪಿಸಲು ಅನುಕೂಲವಾಗುವಂತೆ ನಿಗಮಗಳು ಬೋರವೆಲ್ಗಳ ನೋಂದಣಿ ಕಾರ್ಯ ಮತ್ತು ನಿಗದಿತ ಶುಲ್ಕ ಭರಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಡಾಕುಳಗಿ ಗ್ರಾಮದಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇದರಿಂದ ಟ್ರಾನ್ಸ್ಫಾರ್ಮರ್ಗಳು ಸುಟ್ಟು ಹೋಗುತ್ತಿವೆ ಎಂದು ಜೆಸ್ಕಾಂ ಅಧಿಕಾರಿಗಳು ಸ್ಪಷ್ಟಪಡಿಸಿದರು.

ಕೆಲವು ಕಡೆಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಭೇಟಿ ನೀಡಿದ ಸಂದರ್ಭಗಳಲ್ಲಿ ಕೆಲವು ಪಿಎಚ್ಸಿಗಳು ಸಂಜೆ ಬಾಗಿಲು ಹಾಕಿರುವುದು ಕಂಡು ಬಂದಿವೆ. ಅಂಥ ವೈದ್ಯಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಮನ್ನಾಎಖ್ಖೆಳ್ಳಿ ರಾಷ್ಟ್ರೀಯ ಹೆದ್ದಾರಿ ಮೇಲೆ ಇದ್ದರೂ ಅಲ್ಲಿನ ಆಸ್ಪತ್ರೆಯಲ್ಲಿ ಬ್ಲಡ್ಬ್ಯಾಂಕ್ ಇಲ್ಲ. ರಾಷ್ಟ್ರೀಯ ಹೆದ್ದಾರಿ ಮೇಲೆ ಇರುವ ಎಲ್ಲ ಆಸ್ಪತ್ರೆಗಳಲ್ಲಿ ರಕ್ತ ಸಂಗ್ರಹದ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ತಾನಾಜಿ ಧನಸಿಂಗ್ ರಾಠೋಡ್, ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.