ಸೋಮವಾರ, ಮೇ 17, 2021
23 °C

ಬೌದ್ಧಿಕ ಆಸ್ತಿಹಕ್ಕು ಕುರಿತು ಅರಿವು ಮೂಡಿಸಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲ ಸೃಜನಶೀಲರ ಬೌದ್ಧಿಕತೆ ಮನ್ನಣೆ ನೀಡಿ ಜಾರಿಗೆ ಬಂದಿರುವ ಬೌದ್ಧಿಕ ಆಸ್ತಿ ಹಕ್ಕಿನ ಕುರಿತು ಗ್ರಾಮೀಣ ಭಾಗದ ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕು~ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎನ್.ಪ್ರಭುದೇವ್ ಹೇಳಿದರು.ಬೆಂಗಳೂರು ವಿಶ್ವವಿದ್ಯಾಲಯವು ನಗರದ ಸೆಂಟ್ರಲ್ ಕಾಲೇಜಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಬೌದ್ಧಿಕ ಆಸ್ತಿ ಹಕ್ಕು ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.`ಪ್ರಸ್ತುತ ದಿನಗಳಲ್ಲಿ ಸ್ಪರ್ಧೆ ಹೆಚ್ಚಿರುವುದರಿಂದ ಬೌದ್ಧಿಕ ಆಸ್ತಿ ಹಕ್ಕು ಕಾಯಿದೆ ಉಲ್ಲಂಘನೆಯಾಗುತ್ತಿದೆ. ಪ್ರತಿಯೊಬ್ಬರ ಬೌದ್ಧಿಕತೆಗೆ ಮನ್ನಣೆ ನೀಡುವುದು ಅಗತ್ಯವಾಗಿದೆ~ ಎಂದ ಅವರು, `ಆಧುನಿಕ ಯುಗದಲ್ಲಿ ಮುಂದುವರಿದ ತಂತ್ರಜ್ಞಾನದಿಂದ ಬೌದ್ಧಿಕ ಆಸ್ತಿ ಹಕ್ಕಿಗೆ ಧಕ್ಕೆಯಾಗುತ್ತಿದ್ದು, ಈ ಹಕ್ಕಿನ ಉಲ್ಲಂಘನೆಯಾದಲ್ಲಿ ತೆಗೆದುಕೊಳ್ಳಬೇಕಾದ ಕಾನೂನಿಕ ಕ್ರಮಗಳು ಕುರಿತು ಅರಿವು ಮೂಡಿಸುವ ಕಾರ್ಯ ನಡೆಸಬೇಕು~ ಎಂದು ಹೇಳಿದರು.  ಯೂನಿವರ್ಸಿಟಿ ಲಾ ಕಾಲೇಜಿನ ಅಧ್ಯಕ್ಷ ಪ್ರೊ. ಕೆ.ಎಂ.ಎಚ್. ರಾಯಪ್ಪ, `ಹೊಸದಾಗಿ ಉತ್ಪನ್ನವಾಗುವ ಎಲ್ಲ ವಸ್ತುಗಳಿಗೂ ಬೌದ್ಧಿಕ ಹಕ್ಕು ಅನ್ವಯವಾಗುತ್ತದೆ. ವಿ.ವಿ ಮತ್ತು ಕಾಲೇಜುಗಳು ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸ ಬೇಕು~ ಎಂದು ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.