ಚನ್ನಮ್ಮನ ಕಿತ್ತೂರು:  ಇಲ್ಲಿಗೆ ಸಮೀಪದ ಎಂ.ಕೆ.ಹುಬ್ಬಳ್ಳಿಯ ಭಾರತೀಯ ಸ್ಟೇಟ್ ಬ್ಯಾಂಕ್ ಶಾಖೆಯಲ್ಲಿ ಸೋಮವಾರ ಬೆಳಗಿನ ಜಾವ ಸಂಭವಿಸಿದ ಅಗ್ನಿ ದುರಂತದಲ್ಲಿ ಸುಮಾರು 10 ಲಕ್ಷ ರೂಪಾಯಿ ಮೌಲ್ಯದ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ.

ಮೊದಲ ಮಹಡಿಯಲ್ಲಿದ್ದ ಕಂಪ್ಯೂಟರ್, ಯುಪಿಎಸ್, ಪೀಠೋಪಕರಣಗಳು, ಶಾಖಾ ಪ್ರಬಂಧಕರ ಕೊಠಡಿ ಬೆಂಕಿಗೆ ತುತ್ತಾಗಿವೆ. ಗ್ರಾಹಕರ ದಾಖಲೆ, ನಗದು ಮತ್ತು ಬಂಗಾರಕ್ಕೆ ಯಾವುದೇ ಹಾನಿಯಾಗಿಲ್ಲ ಎಂದು ಬ್ಯಾಂಕ್ ಅಧಿಕಾರಿಗಳು ತಿಳಿಸಿದ್ದಾರೆ.

`ಎಂ.ಕೆ.ಹುಬ್ಬಳ್ಳಿ ಹಾಗೂ ಸುತ್ತಲಿನ ಗ್ರಾಮಗಳ ಗ್ರಾಹಕರ ಅನುಕೂಲಕ್ಕಾಗಿ ಚನ್ನಮ್ಮನ ಕಿತ್ತೂರು ಹಾಗೂ ಬೈಲಹೊಂಗಲ ಬ್ಯಾಂಕ್ ಶಾಖೆಗಳಲ್ಲಿ ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ. ಅಲ್ಲಿ ಈ ಭಾಗದ ಗ್ರಾಹಕರು ವ್ಯವಹರಿಸಬಹುದಾಗಿದೆ. ಶೀಘ್ರದಲ್ಲೇ ಈ ಶಾಖೆ ಪುನಃ ಎಂದಿನಂತೆ ಕಾರ್ಯ ನಿರ್ವಹಿಸಲಿದೆ~ ಎಂದು ಶಾಖಾ ಪ್ರಬಂಧಕಿ ಮಣಿಮಾಲಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.