ಶುಕ್ರವಾರ, ಮೇ 20, 2022
26 °C

ಬ್ಯಾಂಕ್‌ಗಳ ಪಾತ್ರ; ಪ್ರಣವ್ ಶ್ಲಾಘನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಜಾಗತಿಕ ಹಣಕಾಸಿನ ಬಿಕ್ಕಟ್ಟಿನ ಸಂದರ್ಭದಲ್ಲಿ ದೇಶಿ ಬ್ಯಾಂಕ್‌ಗಳು ಆರ್ಥಿಕ ಚಟುವಟಿಕೆಗಳಿಗೆ ಅಗತ್ಯವಾದ ಹಣಕಾಸಿನ ಅಗತ್ಯಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಸೂಕ್ತವಾಗಿ ಸ್ಪಂದಿಸಿವೆ ಎಂದು ಹಣಕಾಸು ಸಚಿವ ಪ್ರಣವ್ ಮುಖರ್ಜಿ ಅವರು ಶಹಬ್ಬಾಸಗಿರಿ ನೀಡಿದ್ದಾರೆ.ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಬ್ಯಾಂಕ್‌ಗಳು ಪ್ರಮುಖ ಪಾತ್ರ ನಿರ್ವಹಿಸುತ್ತ ಬಂದಿವೆ. ಬಿಕ್ಕಟ್ಟಿನ ಸಂದರ್ಭದಲ್ಲಿ ಅರ್ಥ ವ್ಯವಸ್ಥೆಗೆ ಬೇಕಾದ ಸಾಲದ ಅಗತ್ಯ ಪೂರೈಸುವ ಮೂಲಕ ಬ್ಯಾಂಕ್‌ಗಳು ಸಕಾರಾತ್ಮಕವಾಗಿ ಸ್ಪಂದಿಸಿವೆ ಎಂದರು.ವಿಜಯ ಬ್ಯಾಂಕ್‌ನ 40 ಶಾಖೆಗಳು ಮತ್ತು 80 ಎಟಿಎಂಗಳ ಉದ್ಘಾಟನೆಯನ್ನೂ ಪ್ರಣವ್ ನೆರವೇರಿಸಿದರು. ಈಗ ಬ್ಯಾಂಕ್‌ನ ಒಟ್ಟು ಶಾಖೆಗಳ ಸಂಖ್ಯೆ 1,240ಕ್ಕೆ ಏರಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.