ಬ್ಯಾಂಕ್ ವ್ಯವಸ್ಥಾಪಕ ಅಮಾನತು

ಸೋಮವಾರ, ಜೂಲೈ 22, 2019
26 °C

ಬ್ಯಾಂಕ್ ವ್ಯವಸ್ಥಾಪಕ ಅಮಾನತು

Published:
Updated:

ಬೆಂಗಳೂರು: ರೈತರ ಹೆಸರಿನಲ್ಲಿ ಶೇ 1ರ ಬಡ್ಡಿ ದರದಲ್ಲಿ ಸುಮಾರು ರೂ. 3 ಕೋಟಿ ಸಾಲ ಪಡೆದ ದಾವಣಗೆರೆ ಡಿಸಿಸಿ ಬ್ಯಾಂಕಿನ ಹೊನ್ನಾಳಿ ಶಾಖೆಯ ವ್ಯವಸ್ಥಾಪಕ ಸ್ಟ್ಯಾನ್ಲಿ ಕುಮಾರ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ತಿಳಿಸಿದರು.

ಬೇರೆ ಬೇರೆ ರೈತರ ಹೆಸರಿನಲ್ಲಿ ಸಾಲ ದುರುಪಯೋಗಪಡಿಸಿಕೊಂಡಿರುವುದು ಪತ್ತೆಯಾಗಿದ್ದು, ವಸೂಲಿಗೆ ಕ್ರಮ ತೆಗೆದುಕೊಳ್ಳಲಾಗಿದೆ. ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡು ವಸೂಲಿ ಮಾಡಲಾಗುತ್ತಿದೆ ಎಂದರು.

ರೈತರಿಗೆ ಅನುಕೂಲವಾಗಲಿ ಎಂದು ಕಡಿಮೆ ಬಡ್ಡಿ ದರದಲ್ಲಿ ಸಾಲ ಕೊಟ್ಟಿದ್ದನ್ನೇ ಈ ಅಧಿಕಾರಿ ಸ್ವಂತಕ್ಕೆ ಬಳಕೆ ಮಾಡಿಕೊಂಡಿದ್ದು, ಈ ರೀತಿಯ ಪ್ರಕರಣಗಳು ಮರುಕಳಿಸದಂತೆ ಎಚ್ಚರ ವಹಿಸಲಾಗಿದೆ  ಎಂದು ವಿವರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry