ಶುಕ್ರವಾರ, ಮೇ 20, 2022
19 °C

ಬ್ಯಾಕಲಾಗ್ ಹುದ್ದೆ: ನಕಲಿ ಜಾತಿ ಪ್ರಮಾಣ ಪತ್ರ....

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾವೇರಿ: `ರಾಜ್ಯದಲ್ಲಿ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಉದ್ಯೋಗ ಪಡೆದವರನ್ನು ವಜಾಗೊಳಿಸಬೇಕೆಂದು~ ರಾಜ್ಯ ಎಲ್.ಜಿ.ಹಾವನೂರು ನಾಯಕರ ಮೀಸಲಾತಿ ಹೋರಾಟ ಸಮಿತಿ ಪ್ರಧಾನ ಕಾರ್ಯದರ್ಶಿ ರವೀಂದ್ರಗೌಡ ಪಾಟೀಲ ಒತ್ತಾಯಿಸಿದರು.ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 40 ಸಾವಿರ ಜನರು ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಉದ್ಯೋಗ ಪಡೆದಿದ್ದಾರೆ, ಇದರಿಂದ ಮೂಲ ಪರಿಶಿಷ್ಟ ಜಾತಿ ಫಲಾನುಭವಿಗಳಿಗೆ ಅನ್ಯಾಯವಾಗಿದೆ ಎಂದು ಹೇಳಿದರು.ಎಸ್.ಎಂ.ಕೃಷ್ಣ ಅವರು ಮುಖ್ಯ ಮಂತ್ರಿಯಾಗಿದ್ದಾಗ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳ ಲಾಗಿದೆ. ಈ ಸಂದರ್ಭದಲ್ಲಿ ಸುಮಾರು 40 ಸಾವಿರ ಜನ ನಕಲಿ ಜಾತಿ ಪ್ರಮಾಣ ಪತ್ರ ಪಡೆದು ಉದ್ಯೋಗ  ಪಡೆದು ಕೊಂಡಿದ್ದಾರೆ ಎಂದು ಆರೋಪಿಸಿದರು.ಕೇವಲ ಅಭ್ಯರ್ಥಿಗಳನ್ನಷ್ಟೇ ಅಲ್ಲದೇ ನಕಲಿ ಜಾತಿ ಪ್ರಮಾಣ ಪತ್ರ ನೀಡಿದ ಆಗಿನ ಅಧಿಕಾರಿಗಳ ಮೇಲೂ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ರಾಜ್ಯಾ ದ್ಯಂತ ಉಗ್ರ ಹೋರಾಟ ಮಾಡಲಾಗು ವುದು ಎಂದು ಎಚ್ಚರಿಕೆ ನೀಡಿದರು.ವಾಲ್ಮೀಕಿ ನಾಯಕ ಜನಾಂಗಕ್ಕೆ ಶೇ.7.5ರ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ ಜಿಲ್ಲಾ ಕೇಂದ್ರ ನಗರದಲ್ಲಿ ಪ್ರತಿಭಟನೆ ನಡೆಸಲಾಗುವುದು. ಅಂದು ಬೆಳಗ್ಗೆ 11ಗಂಟೆಗೆ ಇಲ್ಲಿನ ಮುರುಘ ರಾಜೇಂದ್ರ ದೇವಸ್ಥಾನದಿಂದ ಮೆರವಣಿಗೆ ನಡೆಸಲಾಗುವುದು. ನಂತರ ಜಿಲ್ಲಾಧಿಕಾರಿ ಗಳ ಕಚೇರಿಗೆ ತೆರಳಿ ಧರಣಿ ನಡೆಸಲಿದೆ. ಮುಂದೆ 19ರಂದು ತಾಲ್ಲೂಕು ಕೇಂದ್ರ ಗಳಲ್ಲಿ ಹೋರಾಟ ಹಮ್ಮಿಕೊಳ್ಳಲಾಗು ವುದು ಎಂದು ತಿಳಿಸಿದರು.ಕೇಂದ್ರ ಸರ್ಕಾರ ಶಿಕ್ಷಣ, ಉದ್ಯೋಗ, ರಾಜಕೀಯ ಆರ್ಥಿಕವಾಗಿ ಶೇ.7.5 ಮೀಸಲಾತಿಯನ್ನು ನೀಡುತ್ತದೆ. ಆದರೆ ರಾಜ್ಯ ಸರ್ಕಾರ ಮಾತ್ರ ರಾಜಕೀಯ ಆರ್ಥಿಕವಾಗಿ ಮಾತ್ರ 7.5ರ ಮೀಸಲಾತಿ ಕೊಡುತ್ತದೆ. ಉಳಿದಂತೆ ಉದ್ಯೋಗ ಹಾಗೂ ಶಿಕ್ಷಣಕ್ಕೆ ಬರೀ ಶೇ.3ರಷ್ಟು ಮಾತ್ರ ಮೀಸಲಾತಿ ನೀಡುತ್ತಿದೆ.

 

ಈ ತಾರತಮ್ಯ ನಿವಾರಣೆಯಾಗಬೇಕು. ಸೇರಿದಂತೆ ಮತ್ತಿತರರ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟನೆ ನಡೆಸಲಾಗುತ್ತಿದೆ.ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಜಿಲ್ಲಾ ಅಧ್ಯಕ್ಷ ಚಂದ್ರಣ್ಣ ಬೇಡರ, ಮುಖಂಡ ರಾದ ಬಸವರಾಜ ಹಾದಿಮನಿ, ಹೊನ್ನಪ್ಪ ಮರೆಯಮ್ಮನವರ, ಎಸ್.ಎಚ್.ಕಳ್ಳಿಮನಿ, ಮೂಗಣ್ಣ ದೊಡ್ಡ ಮನಿ, ಕೆ.ಬಿ.ನಾಗಮ್ಮನವರ, ಪರ ಮೇಶಪ್ಪ ಚಿನ್ನಣ್ಣನವರ, ಮಂಜುನಾಥ ಕಂಚಿಕೇರಿ, ಬಸವರಾಜ ಓಲೇಕಾರ ಸೇರಿ ದಂತೆ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.