ಭಾನುವಾರ, ಜೂನ್ 13, 2021
25 °C

ಬ್ಯಾಟರಾಯನಪುರದಲ್ಲಿ ನೀರಿನ ಸಮಸ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಬಹುತೇಕ ಬಡಾವಣೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ತಲೆದೋರಿದ್ದು, ಬೆಂಗಳೂರು ಜಲ ಮಂಡಳಿ ಹಾಗೂ ಪಾಲಿಕೆ ಅಧಿಕಾರಿಗಳು ಕೇವಲ ಪೊಳ್ಳು ಭರವಸೆಗಳನ್ನು ನೀಡುತ್ತಿರುವುದನ್ನು ಬಿಟ್ಟರೆ ಸಮಸ್ಯೆಯನ್ನು ಬಗೆಹರಿಸಲು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಶಾಸಕ ಕೃಷ್ಣಬೈರೇಗೌಡ ಆರೋಪಿಸಿದರು.ಥಣಿಸಂದ್ರ ವಾರ್ಡ್ ವ್ಯಾಪ್ತಿಯ ನಾಗವಾರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, `ಹೊಸದಾಗಿ ಬಿಬಿಎಂಪಿಗೆ ಸೇರ್ಪಡೆಯಾಗಿರುವ ಪ್ರದೇಶಗಳಲ್ಲಿ ಶೇಕಡಾ 70ರಷ್ಟು ಜನರು ಕುಡಿಯುವ ನೀರಿಗಾಗಿ ಕೊಳವೆ ಬಾವಿಗಳನ್ನು ಅವಲಂಬಿಸಿರುವ ಹಿನ್ನೆಲೆಯಲ್ಲಿ ಪ್ರತಿ ವಾರ್ಡಿಗೆ 25 ಲಕ್ಷ ಅನುದಾನ ಸಾಕಾಗುವುದಿಲ್ಲ.ಕನಿಷ್ಠ 50 ಲಕ್ಷ ರೂಪಾಯಿ ಅನುದಾನವನ್ನು ಕೂಡಲೇ ಬಿಡುಗಡೆ ಮಾಡಲು ಪಾಲಿಕೆ ಕ್ರಮ ಕೈಗೊಳ್ಳಬೇಕು~ ಎಂದು ಆಗ್ರಹಿಸಿದರು.ಮಾಜಿ ನಗರಸಭಾ ಸದಸ್ಯರಾದ ಟಿ.ರಮೇಶ್, ನಾಗರಾಜ್, ಪಾರ್ವತಮ್ಮ, ಮಾಜಿ ಗ್ರಾ.ಪಂ.ಅಧ್ಯಕ್ಷ ಡಿ.ಬಿ.ಸುರೇಶ್ ಮೊದಲಾದವರು ಹಾಜರಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.