ಸೋಮವಾರ, ಮೇ 17, 2021
26 °C

`ಬ್ಯಾಟಿಂಗ್ ವೈಫಲ್ಯ ಸೋಲಿಗೆ ಕಾರಣ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬರ್ಮಿಂಗ್ ಹ್ಯಾಂ (ಪಿಟಿಐ): `ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಶನಿವಾರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋಲು ಕಾಣಲು ಬ್ಯಾಟಿಂಗ್ ವೈಫಲ್ಯ ಪ್ರಮುಖ ಕಾರಣವಾಯಿತು' ಎಂದು ಆಸ್ಟ್ರೇಲಿಯಾ ತಂಡದ ನಾಯಕ ಜಾರ್ಜ್ ಬೈಲಿ ಹೇಳಿದರು.ಎಜ್‌ಬಾಸ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ತಂಡ 48 ರನ್‌ಗಳ ಭರ್ಜರಿ ಗೆಲುವು ಸಾಧಿಸಿತ್ತು.ದಂಡ: ಈ ಪಂದ್ಯದಲ್ಲಿ ನಿಧಾನಗತಿಯ ಬೌಲಿಂಗ್ ಮಾಡಿದ ಕಾರಣಕ್ಕಾಗಿ ಆಸ್ಟ್ರೇಲಿಯಾ ತಂಡಕ್ಕೆ  ಐಸಿಸಿ ದಂಡ ವಿಧಿಸಿದೆ. ತಂಡವನ್ನು ಮುನ್ನಡೆಸಿದ್ದ ಜಾರ್ಜ್ ಬೈಲಿಗೆ ಪಂದ್ಯದ ಸಂಭಾವನೆಯ ಶೇ 20ರಷ್ಟು ಹಾಗೂ ಉಳಿದ ಆಟಗಾರರಿಗೆ ಶೇ 10ರಷ್ಟು ದಂಡ ವಿಧಿಸಲಾಗಿದೆ ಎಂದು ಪ್ರಕಟಣೆ ಹೇಳಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.