ಬ್ಯಾಡ್ಮಿಂಟನ್: ಫೈನಲ್‌ಗೆ ಸಿಂಧು

7

ಬ್ಯಾಡ್ಮಿಂಟನ್: ಫೈನಲ್‌ಗೆ ಸಿಂಧು

Published:
Updated:

ನವದೆಹಲಿ (ಪಿಟಿಐ): ಭಾರತದ ಯುವ ಆಟಗಾರ್ತಿ ಪಿ.ವಿ. ಸಿಂಧು ಹಾಲೆಂಡ್‌ನಲ್ಲಿ ನಡೆಯುತ್ತಿರುವ ಡಚ್ ಓಪನ್ ಗ್ರ್ಯಾನ್ ಪ್ರಿ ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್ ಪ್ರವೇಶಿಸಿದರು. ಈ ಮೂಲಕ ಚೊಚ್ಚಲ ಗ್ರ್ಯಾನ್ ಪ್ರಿ ಪ್ರಶಸ್ತಿ ಗೆಲ್ಲುವ ನಿಟ್ಟಿನಲ್ಲಿ ಮತ್ತೊಂದು ಹೆಜ್ಜೆ ಮುಂದಿಟ್ಟರು.ಶನಿವಾರ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಸಿಂಧು 21-14, 15-21, 21-13 ರಲ್ಲಿ ಥಾಯ್ಲೆಂಡ್‌ನ       ಪರ್ನ್‌ತಿಪ್ ಬುರಾನಪ್ರಸೇತುಕ್ ವಿರುದ್ಧ ಪ್ರಯಾಸದ ಗೆಲುವು ಪಡೆದರು. 16ರ ಹರೆಯದ ಆಟಗಾರ್ತಿ ಇದೇ ಮೊದಲ ಬಾರಿಗೆ ಗ್ರ್ಯಾನ್ ಪ್ರಿ ಟೂರ್ನಿಯ ಫೈನಲ್ ಪ್ರವೇಶಿಸಿದ್ದಾರೆ.ಸಿಂಧು ಫೈನಲ್‌ನಲ್ಲಿ ವಿಶ್ವದ 19ನೇ ರ‌್ಯಾಂಕ್‌ನ ಆಟಗಾರ್ತಿ ಹಾಲೆಂಡ್‌ನ ಜಿ ಯಾವೊ ವಿರುದ್ಧ ಪೈಪೋಟಿ ನಡೆಸುವರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry