ಸೋಮವಾರ, ಮೇ 17, 2021
27 °C

ಬ್ಯಾಡ್ಮಿಂಟನ್: ಭಾರತೀಯರ ಪಾರಮ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬ್ಯಾಂಕಾಂಕ್ (ಐಎಎನ್‌ಎಸ್):  ಥಾಯ್ಲೆಂಡ್ ಓಪನ್ ಗ್ರ್ಯಾನ್ ಪ್ರಿ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಭಾರತೀಯರಾದ ಸೈನಾ ನೆಹ್ವಾಲ್, ಪ್ರಣಯ್ ಹಾಗೂ ಶ್ರೀಕಾಂತ್ ಅವರು ಕ್ವಾರ್ಟರ್ ಫೈನಲ್ ಪ್ರವೇಶಿಸುವ ಮೂಲಕ ಟೂರ್ನಿಯಲ್ಲಿ ಪಾರಮ್ಯ ಮೆರೆದಿದ್ದಾರೆ.ಹಾಲಿ ಚಾಂಪಿಯನ್ ಸೈನಾ ನೆಹ್ವಾಲ್ ಅವರು ಥಾಯ್ಲೆಂಡ್ ಓಪನ್ ಗ್ರ್ಯಾನ್ ಪ್ರಿ ಗೋಲ್ಡ್ ಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಪ್ರವೇಶಿಸಿದ್ದಾರೆ.ಗುರುವಾರ ನಡೆದ ಪ್ರೀ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಸೈನಾ ಅವರು ಇಂಡೋನೇಷ್ಯಾದ ಫೆಬಿ ಅಂಗುನಿ ಅವರನ್ನು 21-13 ಹಾಗೂ 21-11ರ ಸೆಟ್‌ಗಳಲ್ಲಿ ಮಣಿಸಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದರು.ಆದರೆ ಭಾರತದ ಅರುಂಧತಿ ಅವರು  ಸೋಲು ಕಂಡು ಟೂರ್ನಿಯಿಂದ ನಿರ್ಗಮಿಸಿದರು.ಪುರುಷರ ವಿಭಾಗದಲ್ಲಿ ಹೆಚ್.ಎಸ್ ಪ್ರಣಯ್ ಅವರು ಆನಂದ್ ಪವಾರ್ ಅವರನ್ನು ಸೋಲಿಸುವ ಮೂಲಕ  ಕ್ವಾರ್ಟರ್‌ಫೈನಲ್ ಪ್ರವೇಶಿಸಿದ್ದಾರೆ.ಮತ್ತೊಂದು ಪಂದ್ಯದಲ್ಲಿ ಕೆ. ಶ್ರೀಕಾಂತ್ ಅವರು ದಕ್ಷಿಣ ಕೊರಿಯಾದ ವಾಂಗ್‌ಜಂಗ್ ಅವರನ್ನು ಸೋಲಿಸಿ ಕ್ವಾರ್ಟರ್‌ಫೈನಲ್ ಪ್ರವೇಶಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.