ಶನಿವಾರ, ಮೇ 15, 2021
25 °C

ಬ್ಯಾಸ್ಕೆಟ್‌ಬಾಲ್: ಕರ್ನಾಟಕಕ್ಕೆ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉತ್ತಮ ಪ್ರದರ್ಶನ ಮುಂದುವರಿಸಿರುವ ಕರ್ನಾಟಕ ಬಾಲಕಿಯರ ತಂಡದವರು ಲಖನೌದಲ್ಲಿ ನಡೆಯುತ್ತಿರುವ 38ನೇ ರಾಷ್ಟ್ರೀಯ ಸಬ್ ಜೂನಿಯರ್ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನ ಪಂದ್ಯದಲ್ಲಿ ಗೆಲುವು ಪಡೆದರು.ಸೋಮವಾರ ನಡೆದ ಪಂದ್ಯದಲ್ಲಿ ಕರ್ನಾಟಕ ಬಾಲಕಿಯರ ತಂಡ 35-6 ಪಾಯಿಂಟ್‌ಗಳಿಂದ ಜಾರ್ಖಂಡ್ ತಂಡವನ್ನು ಸೋಲಿಸಿತು.ವಿರಾಮದ ವೇಳೆಗೆ ವಿಜಯಿ ತಂಡ 20-2ರಲ್ಲಿ ಮುನ್ನಡೆ ಸಾಧಿಸಿತ್ತು. ಈ ಪಂದ್ಯದಲ್ಲಿಯು ಲೋಪಮುದ್ರ (8) ಮಿಂಚಿನ ಆಟವಾಡಿದರು. ಈ ಹಿಂದಿನ ಎರಡೂ ಪಂದ್ಯಗಳಲ್ಲಿ ಈ ಆಟಗಾರ್ತಿ ಚುರುಕಿನ ಪ್ರದರ್ಶನ ನೀಡಿದ್ದರು. ಅನುಷಾ ಹಾಗೂ ಅಹನಾ ಕ್ರಮವಾಗಿ 10 ಮತ್ತು 6 ಪಾಯಿಂಟ್ ಗಳಿಸಿ ಗಮನ ಸೆಳೆದರು.ಕರ್ನಾಟಕ ಬಾಲಕಿಯರ ತಂಡಕ್ಕೆ ದೊರೆತ ಸತತ ಮೂರನೇ ಜಯ ಇದು. ಮೊದಲ ಪಂದ್ಯದಲ್ಲಿ ಉತ್ತರ ಪ್ರದೇಶ ಹಾಗೂ ಎರಡನೇ ಪಂದ್ಯದಲ್ಲಿ ಮಧ್ಯ ಪ್ರದೇಶ ತಂಡವನ್ನು ಸೋಲಿಸಿತ್ತು.

ಬಾಲಕರ ತಂಡ ಇನ್ನೂ ಯಾವುದೇ ಪಂದ್ಯದಲ್ಲಿ ಗೆಲುವು ಸಾಧಿಸಿಲ್ಲ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.