ಮಂಗಳವಾರ, ಮೇ 11, 2021
24 °C

ಬ್ಯಾಸ್ಕೆಟ್‌ಬಾಲ್: ಕರ್ನಾಟಕ ತಂಡಕ್ಕೆ ಗೆಲುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಉತ್ತಮ ಪ್ರದರ್ಶನ ಮುಂದುವರಿಸಿರುವ ಕರ್ನಾಟಕ ಬಾಲಕಿಯರ ತಂಡದವರು ಲಖನೌನಲ್ಲಿ ನಡೆಯುತ್ತಿರುವ 38ನೇ ಸಬ್ ಜೂನಿಯರ್ ರಾಷ್ಟ್ರೀಯ ಬ್ಯಾಸ್ಕೆಟ್‌ಬಾಲ್ ಚಾಂಪಿಯನ್‌ಷಿಪ್‌ನಲ್ಲಿ ಎರಡನೇ ಗೆಲುವು ಪಡೆದರು.ಭಾನುವಾರ ನಡೆದ ಪಂದ್ಯದಲ್ಲಿ ಬಾಲಕಿಯರ ತಂಡ 35-23ಪಾಯಿಂಟ್‌ಗಳಿಂದ ಮಧ್ಯ ಪ್ರದೇಶ ತಂಡವನ್ನು ಮಣಿಸಿತು. ಲೋಪಮುದ್ರ (20) ಹಾಗೂ ಸಂಧ್ಯಾ  (8) ಚುರುಕಿನ ಆಟವಾಡಿದರು. ಈ ತಂಡ ಮೊದಲ ಪಂದ್ಯದಲ್ಲಿ ಉತ್ತರ ಪ್ರದೇಶ ಎದುರು ಜಯ ಸಾಧಿಸಿತ್ತು.ಬಾಲಕರ ತಂಡಕ್ಕೆಸೋಲು: ಇದೇ ಚಾಂಪಿಯನ್‌ಷಿಪ್‌ನಲ್ಲಿ ಕರ್ನಾಟಕ ಬಾಲಕರ ತಂಡ 13-38 ಪಾಯಿಂಟ್‌ಗಳಿಂದ ಒಡಿಶಾ ತಂಡದ ಎದುರು ಸೋಲು ಕಂಡಿತು. ಈ ತಂಡದ ಮೊಹಾಂತಿ (15) ಪಾಯಿಂಟ್ ಗಳಿಸಿ ಗಮನ ಸೆಳೆದರು ಎಂದು ಇಲ್ಲಿಗೆ ಬಂದಿರುವ ವರದಿಗಳು ತಿಳಿಸಿವೆ. ಬಾಲಕರ ತಂಡ ತನ್ನ ಮೊದಲ ಪಂದ್ಯದಲ್ಲಿ ಜಾರ್ಖಂಡ್ ಎದುರು ಸೋಲು ಕಂಡಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.