ಶನಿವಾರ, ಮೇ 8, 2021
26 °C

ಬ್ರಿಕ್ ಹಣಕಾಸು ಸಚಿವರ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಜಾಗತಿಕ ಆರ್ಥಿಕ ಅಸ್ಥಿರತೆ ಕುರಿತು ಚರ್ಚಿಸಲು ಬ್ರೆಜಿಲ್, ರಷ್ಯಾ, ಭಾರತ, ಚೀನಾ, ಮತ್ತು ದಕ್ಷಿಣ ಆಫ್ರಿಕಾವನ್ನು ಒಳಗೊಂಡ `ಬ್ರಿಕ್~ ದೇಶಗಳ ಹಣಕಾಸು ಸಚಿವರು ಸೆಪ್ಟೆಂಬರ್ 22ರಂದು ವಾಷಿಂಗ್ಟನ್‌ನಲ್ಲಿ ಸಭೆ ಸೇರಲಿದ್ದಾರೆ.ಕೇಂದ್ರ ಹಣಕಾಸು ಸಚಿವ ಪ್ರಣವ್ ಮುಖರ್ಜಿ ಈ ಸಭೆಯಲ್ಲಿ ಭಾಗವಹಿಸುತ್ತಿದ್ದು, ಅಮೆರಿಕ  ಮತ್ತು           ಯೂರೋಪ್ ಒಕ್ಕೂಟದ ಸಾಲದ ಬಿಕ್ಕಟ್ಟಿನಿಂದ ಜಾಗತಿಕ ಅರ್ಥ ವ್ಯವಸ್ಥೆಯ ಮೇಲಾಗಿರುವ ಪರಿಣಾಮಗಳ ಕುರಿತು ಮಾತುಕತೆ ನಡೆಸಲಿದ್ದಾರೆ.`ಸದ್ಯದ ಆರ್ಥಿಕ ಸ್ಥಿತಿಗತಿ ಮತ್ತು ಇದಕ್ಕೆ ಸಂಬಂಧಿಸಿದಂತೆ `ಬ್ರಿಕ್~ ದೇಶಗಳು ಕೈಗೊಳ್ಳಬೇಕಾದ ಜಾಗತಿಕ ನೀತಿಯೊಂದರ ಕುರಿತು ಚರ್ಚೆ ನಡೆಯಲಿದೆ. ಭಾರತವೂ ಸೇರಿದಂತೆ ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಲ್ಲಿ ಜಾಗತಿಕ ಆರ್ಥಿಕ ಬಿಕ್ಕಟ್ಟು ಸೃಷ್ಟಿಸಲಿರುವ ಹೊಸ ಸವಾಲುಗಳ ಕುರಿತು ಮಾತುಕತೆ ನಡೆಸಲಿದ್ದೇವೆ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.ಇದರೆ ಜತೆಗೆ, `ಬ್ರಿಕ್~ ದೇಶಗಳ ಮುಖಂಡರು ಅಂತರರಾಷ್ಟ್ರೀಯ ಹಣಕಾಸು ನಿಧಿಯ ವಾರ್ಷಿಕ (ಐಎಂಎಫ್) ಸಭೆಯಲ್ಲೂ ಭಾಗವಹಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಣವ್ ಮುಖರ್ಜಿ ಅವರು `ಬ್ರಿಕ್~ ದೇಶಗಳ ಹಣಕಾಸು ಸಚಿವರ ಜತೆಗೆ ದ್ವಿಪಕ್ಷೀಯ ಆರ್ಥಿಕ ಸಹಕಾರದ ಕುರಿತು ಮಾತುಕತೆ ನಡೆಸುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ವಾಣಿಜ್ಯ ನಿಯೋಗವೊಂದು ಸಚಿವರ ಜತೆ ವಾಷಿಂಗ್ಟನ್‌ಗೆ ತೆರಳುತ್ತಿದೆ ಎಂದು ಮೂಲಗಳು ತಿಳಿಸಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.