ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ (ಕೆಎಸ್ಸಿಎ) ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯಿಂದ (ಬಿಸಿಸಿಐ) ಹಲವು ಅವಕಾಶಗಳು ಒಲಿದು ಬರುತ್ತಿವೆ. ರಾಜ್ಯ ಸಂಸ್ಥೆಗೆ ದೊರಕಿರುವ ಮತ್ತೊಂದು ಅವಕಾಶದಲ್ಲಿ ಕಾರ್ಯದರ್ಶಿ ಬ್ರಿಜೇಶ್ ಪಟೇಲ್ ಅವರನ್ನು ಬಾಂಗ್ಲಾದೇಶದಲ್ಲಿ ನಡೆಯುಲಿರುವ ಐಸಿಸಿ ಟ್ವೆಂಟಿ–20 ವಿಶ್ವಕಪ್ ಕ್ರಿಕೆಟ್ ಟೂರ್ನಿಗೆ ಭಾರತ ತಂಡದ ಮ್ಯಾನೇಜರ್ ಆಗಿ ನೇಮಕ ಮಾಡಲಾಗಿದೆ.

ಬಾಂಗ್ಲಾದೇಶದಲ್ಲಿಯೇ ನಡೆಯುತ್ತಿರುವ ಏಷ್ಯಾಕಪ್ಗೆ ಕೆಎಸ್ಸಿಎ ಅಧ್ಯಕ್ಷ ಪಿ.ಆರ್. ಅಶೋಕಾನಂದ ಅವರು ತಂಡದ ಮ್ಯಾನೇಜರ್ ಆಗಿದ್ದಾರೆ. ಹೋದ ವರ್ಷ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಕ್ರಿಕೆಟ್ ಸರಣಿಯಲ್ಲಿ ಸುಧಾಕರ್ರಾವ್ ತಂಡದ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸಿದ್ದರು.

ಬ್ರಿಜೇಶ್ 21 ಟೆಸ್ಟ್ ಹಾಗೂ 10 ಏಕದಿನ ಪಂದ್ಯಗಳಲ್ಲಿ ರಾಷ್ಟ್ರೀಯ ತಂಡ ಪ್ರತಿನಿಧಿಸಿದ್ದರು. ಒಟ್ಟು 203 ಪ್ರಥಮ ದರ್ಜೆ ಪಂದ್ಯಗಳನ್ನು ಅವರು ಆಡಿದ್ದಾರೆ.
ಚುಟುಕು ವಿಶ್ವಕಪ್ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.