ಬ್ಲೂ ಫಿಲಂ ವಿವಾದದಲ್ಲಿ ಸಿಲುಕಿದ ಸಚಿವರ ಸಮರ್ಥನೆ: ಮೊಯ್ಲಿ ಟೀಕೆ

7

ಬ್ಲೂ ಫಿಲಂ ವಿವಾದದಲ್ಲಿ ಸಿಲುಕಿದ ಸಚಿವರ ಸಮರ್ಥನೆ: ಮೊಯ್ಲಿ ಟೀಕೆ

Published:
Updated:

ಬೆಂಗಳೂರು: `ಬ್ಲೂ ಫಿಲಂ~ ವಿವಾದದಲ್ಲಿ ಸಿಲುಕಿದ ಸಚಿವರನ್ನು ಸಮರ್ಥಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕ್ರಮವನ್ನು ಖಂಡಿಸಿರುವ ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವ ಎಂ. ವೀರಪ್ಪ ಮೊಯ್ಲಿ, `ಇದು ಅವರ ಮನೋಭೂಮಿಕೆಯನ್ನು ಪ್ರದರ್ಶಿಸುತ್ತದೆ~ ಎಂದು ಟೀಕಿಸಿದ್ದಾರೆ.ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಭಾನುವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ 385ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಭಾರತೀಯ ಸಂಸ್ಕೃತಿಗೆ ವಿರುದ್ಧವಾದಂತಹ ಈ ಪ್ರಕರಣವನ್ನು ಯಡಿಯೂರಪ್ಪ ಸಮರ್ಥಿಸಿಕೊಂಡಿರುವುದು ಸರಿಯಾದ ಕ್ರಮವಲ್ಲ~ ಎಂದು ಆಕ್ಷೇಪಿಸಿದರು.`ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕೆಪಿಸಿಸಿ ಸೂಕ್ತ ಅಭ್ಯರ್ಥಿಗಳ ಹೆಸರನ್ನು ಹೈಕಮಾಂಡ್‌ಗೆ ಶಿಫಾರಸು ಮಾಡಲಿದೆ. ಹೈಕಮಾಂಡ್ ಅಂತಿಮವಾಗಿ ಪಕ್ಷದ ಅಭ್ಯರ್ಥಿಯ ಹೆಸರನ್ನು ಅಖೈರುಗೊಳಿಸಲಿದೆ~ ಎಂದು ಅವರು ತಿಳಿಸಿದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry