ಸೋಮವಾರ, ಜೂನ್ 14, 2021
26 °C
ಚಳ್ಳಕೆರೆ: ಜೆಡಿಎಸ್‌ ಸಮಾವೇಶದಲ್ಲಿ ಗೂಳಿಹಟ್ಟಿ ಶೇಖರ್‌ ಭರವಸೆ

ಭದ್ರಾ ಮೇಲ್ದಂಡೆ ಯೋಜನೆ ಜಾರಿಗೆ ಆದ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ‘ಜಿಲ್ಲೆಗೆ ಭದ್ರಾಮೇಲ್ದಂಡೆ ಯೋಜನೆ ಅನುಷ್ಠಾನಕ್ಕಾಗಿ ಸಚಿವನಾಗಿದ್ದ ಸಂದರ್ಭದಲ್ಲಿ ₨ 5600 ಕೋಟಿ ಅನುಮೋದನೆಯ ಮಂಜೂರಾತಿಗಾಗಿ ಶ್ರಮಿಸಿದ್ದೇನೆ’ ಎಂದು ಮಾಜಿ ಸಚಿವ ಗೂಳಿಹಟ್ಟಿ ಡಿ. ಶೇಖರ್‌ ಹೇಳಿದರು.ಪಟ್ಟಣದ ಚಿತ್ರದುರ್ಗ ರಸ್ತೆಯಲ್ಲಿರುವ ಕುಂಚಿಟಿಗ ಒಕ್ಕಲಿಗರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಭಾನುವಾರ ನಡೆದ ಜೆಡಿಎಸ್ ಸಮಾವೇಶಲ್ಲಿ ಅವರು ಮಾತನಾಡಿದರು.‘ಸಂಸತ್‌ ಸದಸ್ಯರು ಕೇಂದ್ರದ ಯಾವುದೇ ಯೋಜನೆಗಳನ್ನು ಜಿಲ್ಲೆಗೆ ತರಲು ಮುಂದಾಗಿಲ್ಲ ಎಂದು ದೂರಿದ ಅವರು, ಸಂಸತ್‌ ಸದಸ್ಯನಾದರೆ, ಜಿಲ್ಲೆಗೆ ಭದ್ರಾ ಮೇಲ್ದಂಡೆ ಯೋಜನೆ ಪೂರ್ಣಗೊಳಿಸಿ ನೀರು ಒದಗಿಸುವ ಕೆಲಸಕ್ಕೆ ಆದ್ಯತೆ ನೀಡುತ್ತೇನೆ’ ಎಂದು ಭರವಸೆ ನೀಡಿದರು.ರಾಜ್ಯ ಸರ್ಕಾರದಲ್ಲಿ ಸಚಿವನಾಗಿದ್ದ ಸಮಯದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಮುಂದಿನ ದಿನಗಳಲ್ಲಿಯೂ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದರು.ಜೆಡಿಎಸ್ ರಾಜ್ಯ ಪ್ರದಾನ ಕಾರ್ಯದರ್ಶಿ ಎಸ್.ಕೆ.ಬಸವರಾಜನ್ ಮಾತನಾಡಿ, ಸಾಮಾನ್ಯ ಜನರ ಬಗ್ಗೆಯೂ ಅತ್ಯಂತ ಕಾಳಜಿ ಉಳ್ಳ ವ್ಯಕ್ತಿ ಗೂಳಿಹಟ್ಟಿ ಶೇಖರ್. ಈ ಹಿಂದೆ ಅವರು ಸಚಿವರಾಗಿದ್ದ ಸಮಯದಲ್ಲಿ ಜಿಲ್ಲೆಯಲ್ಲಿ  ಹಲವು ಯೋಜನೆಗಳನ್ನು ಜಾರಿಗೆ ತಂದು ಜನಮನ್ನಣೆ ಗಳಿಸಿದ್ದಾರೆ ಎಂದು ಹೇಳಿದರು.ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ಯಶೋಧರಾ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿಮಾಡಿದರು.ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ಪಿ.ತಿಪ್ಪೇಸ್ವಾಮಿ, ಜಿಲ್ಲಾ ಪಂಚಾಯ್ತಿ ಮಾಜಿ ಅಧ್ಯಕ್ಷ ಟಿ.ರವಿ ಕುಮಾರ್, ಉಪಾಧ್ಯಕ್ಷ ಎ.ಅನಿಲ್ ಕುಮಾರ್, ಜೆಡಿಎಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಒ.ನರಸಿಂಹಮೂರ್ತಿ, ಎನ್.ಭೀಮಪ್ಪ, ಎಚ್.ಆನಂದಪ್ಪ, ಪುರಸಭೆ ಉಪಾಧ್ಯಕ್ಷ ಟಿ.ವಿಜಯ ಕುಮಾರ್,  ಬಿ.ಟಿ.ರಮೇಶ್ ಗೌಡ, ಮಹಮ್ಮದ್ ಸ್ವಾಲೇಹ, ಪ್ರಮೋದ್, ತಾಲ್ಲೂಕು ಪಂಚಾಯ್ತಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.