ಭಾನುವಾರ, ಜೂನ್ 20, 2021
20 °C

ಭದ್ರಾ ಮೇಲ್ದಂಡೆ ಯೋಜನೆ; ಹೆಚ್ಚಿನ ಪರಿಹಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತರೀಕೆರೆ: ರಾಷ್ಟ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಜನತೆ ತಿರಸ್ಕರಿಸಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.ತಾಲ್ಲೂಕಿನ ಲಕ್ಕವಳ್ಳಿ ಗ್ರಾಮದಲ್ಲಿ ಮಂಗಳವಾರ ಪಕ್ಷದ ಅಭ್ಯರ್ಥಿ ಸುನಿಲ್‌ಕುಮಾರ್ ಪರವಾಗಿ ನಡೆದ ಬಿಜೆಪಿಯ ಬಹಿರಂಗ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಭದ್ರಾ ವನ್ಯಜೀವಿ ಮತ್ತು ಕುದುರೆಮುಖ ವಿಭಾಗದ ಹುಲಿ ಸಂರಕ್ಷಣಾ ಯೋಜನೆಯನ್ನು ಕೈಬಿಡಲಾಗಿದೆ ಎಂದು ಸ್ಪಷ್ಟಪಡಿಸಿದ ಅವರು, ಭದ್ರಾ ಮೇಲ್ದಂಡೆ ಯೋಜನೆಯ ಸಂತ್ರಸ್ತರಿಗೆ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರವನ್ನು ಸರ್ಕಾರ ನೀಡಲಿದೆ ಎಂದರು.ಅಧಿಕಾರಕ್ಕೆ ತಂದ ಜನತೆಯನ್ನು ಅದಿಕಾರಸ್ಥರು ಮರೆಯಬಾರದು ಎಂದ ಅವರು, ಜನತೆ ನಮ್ಮ ಮೇಲೆ ಇಟ್ಟಿರುವ ನಂಬಿಕೆಗೆ ಚ್ಯುತಿ ತರದ ಹಾಗೆ ರಾಜ್ಯದಲ್ಲಿ ಅಧಿಕಾರ ನಡೆಸಿದ ಕೀರ್ತಿ ಬಿಜೆಪಿಗಿದೆ. ಪಕ್ಷದ ಅಭ್ಯರ್ಥಿ ಸೂಕ್ತವಾದ ಆಯ್ಕೆಯಾಗಿದ್ದು, ಅವರನ್ನು ಗೆಲ್ಲಿಸುವಂತೆ ಮನವಿ ಮಾಡಿದರು.ಸಚಿವ ವರ್ತೂರು ಪ್ರಕಾಶ್ ಮಾತನಾಡಿ, ಪ್ರಸ್ತುತ ಚುನಾವಣೆಯ ಪಲಿತಾಂಶ ರಾಜ್ಯ ರಾಜಕಾರಣದಲ್ಲಿ ಹೊಸ ರಾಜಕೀಯ ಚಟುವಟಿಕೆಗೆ ನಾಂದಿಯಾಗಲಿದೆ ಎಂದರು.

ಶಾಸಕ ಡಿ.ಎಸ್.ಸುರೇಶ್ ಮತನಾಡಿ, ಜನತೆಗೆ ಕೇವಲ ಭರವಸೆ ಮಾತ್ರ ಬಿಜೆಪಿ ನೀಡಿಲ್ಲ. ನೀಡಿದ ಭರವಸೆಯನ್ನು ಈಡೇರಿಸಿದ್ದೇವೆ. ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕಾರ್ಯದ ಆಧಾರದ ಮೇಲೆ ಜನರ ಬಳಿ ಮತವನ್ನ ಕೇಳುತ್ತೇವೆ ಎಂದರು.ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸದಸ್ಯ ಎನ್.ಮಂಜುನಾಥ್, ಕಡೂರು ಶಾಸಕ ಡಾ.ವಿಶ್ವನಾಥ್, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಎ.ಆರ್.ರಾಜಶೇಖರ್, ಪಕ್ಷದ ಅಧ್ಯಕ್ಷ ಶಾಂತರಾಜ್, ಮುಂಖಂಡರಾದ ಅರವಿಂದ್, ಸಂಜಯ್‌ಕುಮಾರ್, ರಮೇಶ್, ಗಿರೀಶ್, ಶಂಬೈನೂರು ಆನಂದಪ್ಪ ಮತ್ತು ಬಿಬಿಎಂಪಿ ಸದಸ್ಯ ಟಿ.ಪಿ.ರಾಜು ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.