ಮಂಗಳವಾರ, ಮೇ 11, 2021
26 °C

ಭದ್ರಾ ಮೇಲ್ದಂಡೆ: ರದ್ದತಿ ಕೋರಿ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮೂಲ ಆಶಯ ಈಡೇರಿಸದ ಭದ್ರಾ ಮೇಲ್ದಂಡೆ ಯೋಜನೆಯು ಅವೈಜ್ಞಾನಿಕವಾಗಿದ್ದು ಅದನ್ನು ಸ್ಥಗಿತಗೊಳಿಸಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.ಎಚ್.ಎಸ್.ನೀಲಕಂಠಪ್ಪ ಎನ್ನುವವರು ಸಲ್ಲಿಸಿರುವ ಈ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರ, ಕರ್ನಾಟಕ ನೀರಾವರಿ ನಿಗಮದ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಇತರ ಪ್ರತಿವಾದಿಗಳಿಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ನೇತೃತ್ವದ ವಿಭಾಗೀಯ ಪೀಠ ನೋಟಿಸ್ ಜಾರಿಗೆ ಆದೇಶಿಸಿದೆ.ಯೋಜನೆಯ ಮೂಲ ಆಶಯ ಎಂದರೆ ಸಮೀಪದ ಎಲ್ಲ ಗ್ರಾಮಗಳಿಗೂ ನೀರು ಪೂರೈಕೆ ಆಗಬೇಕು ಎನ್ನುವುದು. ಆದರೆ ಈ ಯೋಜನೆಯನ್ನು ಅವೈಜ್ಞಾನಿಕವಾಗಿ ರೂಪಿಸಲಾಗಿದೆ.ಚಿತ್ರದುರ್ಗ, ತುಮಕೂರು, ಕೋಲಾರ ಜಿಲ್ಲೆಗಳನ್ನು ಮಾತ್ರ ಗಮನದಲ್ಲಿ ಇಟ್ಟುಕೊಳ್ಳಲಾಗಿದೆ. ಆದರೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಹಾಗೂ ಕಡೂರು ತಾಲ್ಲೂಕಿಗೆ ನೀರು ಪೂರೈಕೆ ಆಗುತ್ತಿಲ್ಲ. ಆದುದರಿಂದ ಇದು ಕಾನೂನುಬಾಹಿರ ಯೋಜನೆ ಆಗಿದೆ ಎನ್ನುವುದು ಅರ್ಜಿದಾರರ ದೂರು.2008ರ ಸೆ.15ರಂದು ಸರ್ಕಾರ ಆದೇಶ ಹೊರಡಿಸಿ ಈ ಯೋಜನೆಗೆ ಹಸಿರು ನಿಶಾನೆ ತೋರಿದೆ.

ಈ ಎರಡು ತಾಲ್ಲೂಕುಗಳನ್ನು ನೀರು ಪೂರೈಕೆಯಿಂದ ಹೊರಕ್ಕೆ ಇಡಲಾಗಿದೆ ಎಂಬ ಮಾಹಿತಿ ಸಿಕ್ಕ ತಕ್ಷಣ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನ ಆಗಲಿಲ್ಲ ಎನ್ನುವುದು ಅವರ ದೂರು. ವಿಚಾರಣೆ ಮುಂದೂಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.