ಭಾನುವಾರ, ನವೆಂಬರ್ 17, 2019
21 °C

ಭಯೋತ್ಪಾದನೆ: ಯುಪಿಎನಿಂದ ಮೃದು ಧೋರಣೆ

Published:
Updated:

ಬೆಂಗಳೂರು: `ಕೇಂದ್ರದಲ್ಲಿ ಯು.ಪಿ.ಎ ಅಧಿಕಾರಕ್ಕೆ ಬಂದ ನಂತರ ಭಯೋತ್ಪಾದನೆ ವಿಚಾರದಲ್ಲಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿಲ್ಲ. ಈ ಕಾರಣಕ್ಕೆ ಪ್ರತಿ ಎರಡು ತಿಂಗಳಿಗೊಮ್ಮೆ ದೇಶದಲ್ಲಿ ಬಾಂಬ್ ಸ್ಫೋಟಗಳು ಸಂಭವಿಸುತ್ತಿವೆ' ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಮುಕ್ತಾರ್ ಅಬ್ಬಾಸ್ ನಕ್ವಿ ಗುರುವಾರ ಇಲ್ಲಿ ಟೀಕಿಸಿದರು.ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಿದ ನಂತರ ಅವರು ಸುದ್ದಿಗಾರರ ಜತೆ ಮಾತನಾಡಿದರು. ಯುಪಿಎ ಸರ್ಕಾರದ ಆಳ್ವಿಕೆಯಲ್ಲಿ ಭಯೋತ್ಪಾದಕರಿಗೆ ಭಯ ಇಲ್ಲದಂತಾಗಿದೆ ಎಂದು ಅವರು ಹೇಳಿದರು.`ಕೇಂದ್ರದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ, ಭಯೋತ್ಪಾದನೆ ನಿಗ್ರಹಕ್ಕೆ ಕಠಿಣ ಕಾನೂನು ರೂಪಿಸಲಿದೆ. ಈ ವಿಷಯದಲ್ಲಿ ರಾಜಿ ಮಾಡಿಕೊಳ್ಳುವುದಿಲ್ಲ' ಎಂದರು. ಮಲ್ಲೇಶ್ವರದ ಬಾಂಬ್ ಸ್ಫೋಟ ಪ್ರಕರಣವನ್ನು ರಾಜಕೀಯಕ್ಕೆ ಬಳಸಬಾರದು ಎಂದು ಹೇಳಿದರು.

ಪ್ರತಿಕ್ರಿಯಿಸಿ (+)