ಮಂಗಳವಾರ, ಜೂನ್ 22, 2021
29 °C

ಭವಿಷ್ಯದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ವಿರಳ: ನ್ಯಾ. ಮನ್ಸೂರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗಮಂಗಲ: ಹೆಣ್ಣು ಮಕ್ಕಳನ್ನು ತಿರಸ್ಕಾರ ಮನೋಭಾವದಿಂದ ನೋಡಲಾಗುತ್ತಿದೆ. ಪರಿಸ್ಥಿತಿ ಹೀಗೆ ಮುಂದುವರೆದರೆ ಭವಿಷ್ಯದಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಅತ್ಯಂತ ವಿರಳವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ನಾಗಮಂಗಲ ಸಿವಿಲ್ ಕೋರ್ಟ್‌ನ ಹಿರಿಯ ಶ್ರೇಣಿ ನ್ಯಾಯಾಧೀಶ ಮನ್ಸೂರ್ ಅಹಮದ್ ಝಮಾನ್ ಅಭಿಪ್ರಾಯಪಟ್ಟರು.ಈಚೆಗೆ ಪಟ್ಟಣದ ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲ್ಲೂಕು ಕಾನೂನು ಸೇವಾ ಸಮಿತಿ ಸಹಯೋಗದಲ್ಲಿ ಏರ್ಪಡಿಸಿದ್ದ ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ತಂತ್ರ ಕಾಯಿದೆ ಬಗ್ಗೆ ತಾಲ್ಲೂಕು ಮಟ್ಟದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ವೈದ್ಯಕೀಯ ಕ್ಷೇತ್ರದಲ್ಲಿ ತಂತ್ರಜ್ಞಾನ ಉತ್ತಮ ಸ್ಥಿತಿಯಲ್ಲಿದೆ. ಆದರೆ, ಆ ತಂತ್ರಜ್ಞಾನ ದುರ್ಬಳಕೆ ಮಾಡಿಕೊಳ್ಳುತ್ತಿರುವುದೇ ಹೆಚ್ಚು. ತಂತ್ರಜ್ಞಾನದ ಮೂಲಕ ಭ್ರೂಣ ಲಿಂಗ ಪತ್ತೆ ಮಾಡಿ ಹೆಣ್ಣು ಶಿಶು ಎಂದಾದರೆ ಹತ್ಯೆ ಮಾಡುವ ಪ್ರಕ್ರಿಯೆ ಹೆಚ್ಚುತ್ತಲಿದೆ. ಇಂತಹ ಕ್ರಿಯೆ ಕಾನೂನು ರೀತಿ ಅಪರಾಧ. ಹೀಗೆ ಭ್ರೂಣ ಲಿಂಗ ಪತ್ತೆ ಮಾಡುವುದು ಮತ್ತು ಮಾಡಿಸುವುದು ಕೂಡ ಅಪರಾಧ ಎಂದರು.ಕಿರಿಯ ಶ್ರೇಣಿ ನ್ಯಾಯಾಧೀಶ ಪರಶುರಾಮ ದೊಡ್ಡಮನಿ, ವಕೀಲ ಕೆ.ಎಚ್.ಮಹದೇವ್, ವಕೀಲೆ ಮಂಜುಳ ಮಾತನಾಡಿದರು. ತಾಲ್ಲೂಕು ಆರೋಗ್ಯಾಧಿಕಾರಿ ಪ್ರೇಮ ಲತಾ ಗೂಗಿ, ನಾಗಮಂಗಲ ಸಾರ್ವ ಜನಿಕ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಸೋಮಶೇಖರ್ ಹಾಗು ಆಸ್ಪತ್ರೆ ಸಿಬ್ಬಂದಿಗಳಾದ ಅಣ್ಣಪ್ಪ, ದೇವೇಗೌಡ, ಎಂ.ಆರ್.ಚಂದ್ರಶೇಖರ್ ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.