ಮಂಗಳವಾರ, ಏಪ್ರಿಲ್ 20, 2021
32 °C

ಭವಿಷ್ಯನಿಧಿ ಪಿಂಚಣಿ ಹೆಚ್ಚಳ: ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರ (ಪಿಟಿಐ): ಕಾರ್ಮಿಕರ ಭವಿಷ್ಯ ನಿಧಿಯ ಪಿಂಚಣಿ ಮೊತ್ತವನ್ನು  ಒಂದು ಸಾವಿರ ರೂಪಾಯಿಗಳಿಗೆ ಹೆಚ್ಚಿಸುವ ಬೇಡಿಕೆ ಈಡೇರಿಕೆಗೆ ಒಪ್ಪಿಗೆ ನೀಡಬೇಕೆಂಬ ಪ್ರಸ್ತಾವವು ಸದ್ಯ ಹಣಕಾಸು ಸಚಿವಾಲಯದ ಮುಂದೆ ಇದ್ದು, ಶೀಘ್ರದಲ್ಲಿಯೇ ಕೇಂದ್ರ ಸಂಪುಟ ಸಭೆ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾರ್ಮಿಕ ಖಾತೆಯ ರಾಜ್ಯ ಸಚಿವ ಕೊಡಿಕ್ಕುನ್ನಿಲ್ ಸುರೇಶ್ ಶುಕ್ರವಾರ ಹೇಳಿದರು.ಖಾಸಗಿ ಆಸ್ಪತ್ರೆಗಳಲ್ಲಿ ತೊಂದರೆ ಅನುಭವಿಸುತ್ತಿರುವ ದಾದಿಯರ ಸಮಸ್ಯೆ ಬಗ್ಗೆ ಪ್ರಸ್ತಾಪಿಸಿದ ಅವರು, ದಾದಿಯರ ವೇತನ ಮತ್ತು ಸವಲತ್ತುಗಳಿಗಾಗಿ ರಾಜ್ಯ ಸರ್ಕಾರಗಳೇ ಸೂಕ್ತ ಕಾನೂನುಗಳನ್ನು ರಚಿಸಬೇಕು ಎಂದು ಆರೋಗ್ಯ ಸಚಿವಾಲಯ ಎಲ್ಲ ರಾಜ್ಯಗಳಿಗೆ ಪತ್ರ ಬರೆದಿದೆ ಎಂದು ತಿಳಿಸಿದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.