ಗುರುವಾರ , ಜೂನ್ 24, 2021
24 °C

ಭಾಗ್ಯಲಕ್ಷ್ಮೀ ಯೋಜನೆ ಅವ್ಯವಹಾರ: ಕ್ರಮಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿತ್ರದುರ್ಗ: ಚಳ್ಳಕೆರೆ ತಾಲ್ಲೂಕಿನಲ್ಲಿ ಭಾಗ್ಯಲಕ್ಷ್ಮೀ ಯೋಜನೆ ಫಲಾನುಭವಿಗಳಿಗೆ ಬಾಂಡ್ ವಿತರಣೆಯಲ್ಲಿ ನಡೆದಿರುವ ಅವ್ಯವಹಾರದ ಬಗ್ಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಷ್ಟ್ರೀಯ ಕಿಸಾನ್ ಸಂಘದ ಕಾರ್ಯಕರ್ತರು ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಚಳ್ಳಕೆರೆ ತಾಲ್ಲೂಕಿನ ಗೌರಸಮುದ್ರ ಗ್ರಾಮ ಪಂಚಾಯ್ತಿ ವ್ಯಾಪ್ತಿಯ 11 ಫಲಾನುಭವಿಗಳಿಗೆ ಅನ್ಯಾಯ ಮಾಡಲಾಗಿದೆ. ಫಲಾನುಭವಿಗಳು ಹಣ ನೀಡಲು ನಿರಾಕರಿಸಿದ್ದರಿಂದ ಈ ರೀತಿ ಅನ್ಯಾಯ ಮಾಡಲಾಗಿದೆ. ಆದ್ದರಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದರು.11 ಫಲಾನುಭವಿಗಳ ಅರ್ಜಿ ಪಡೆದಿದ್ದರೂ ಸರ್ಕಾರಕ್ಕೆ ಸಲ್ಲಿಸದೆ ಅನ್ಯಾಯ ಮಾಡಲಾಗಿದೆ. ಈ ಘಟನೆಗೆ ಅಂಗನವಾಡಿ ಕಾರ್ಯಕರ್ತೆ ಮತ್ತು ಮೇಲ್ವಿಚಾರಕರು ಹೊಣೆಯಾಗಿದ್ದಾರೆ. ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ತಲುಪಿಸದ ಪರಿಣಾಮ ಇವರನ್ನು ಪೂರ್ಣ ಜವಾಬ್ದಾರರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದರು.ಪ್ರಕರಣದ ಕುರಿತು ದೂರು ಸಲ್ಲಿಸಿದಾಗ ಹಿರಿಯ ಅಧಿಕಾರಿ ಪರಿಶೀಲನೆ ಮಾಡಿದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಆದ್ದರಿಂದ ಫಲಾನುಭವಿಗಳಿಗೆ ಆಗಿರುವ ನಷ್ಟ ತುಂಬಿಕೊಡಬೇಕು ಮತ್ತು ಬಾಂಡ್ ದೊರೆಯುವಂತೆ ನಿರ್ದೇಶನ ನೀಡಬೇಕು ಎಂದು ಆಗ್ರಹಿಸಿದರು.ರಾಷ್ಟ್ರೀಯ ಕಿಸಾನ್‌ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಕೊಂಚೆ ಶಿವರುದ್ರಪ್ಪ, ಮಂಜುಳಾ ಡಾ.ಸ್ವಾಮಿ, ವಿ. ನಾಗಭೂಷಣ ರೆಡ್ಡಿ, ಕೆ.ಪಿ. ಮಲ್ಲಿಕಾರ್ಜುನ್, ರಘುನಾಥರೆಡ್ಡಿ, ಜಯವಾಣಿ ಯಾದವ್, ಸಕೀನಾ, ಪರ್ವೀಸ್, ಶೌಕತ್ ಅಲಿ, ಮಹಮ್ಮದ್ ನಿಜಾಮುದ್ದೀನ್ ಮತ್ತಿತರರು ಪ್ರತಿಭಟನೆಯಲ್ಲಿ ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.