ಶನಿವಾರ, ಮೇ 21, 2022
27 °C

`ಭಾಗ್ ಮಿಲ್ಖಾ ಭಾಗ್' ಬಹಿಷ್ಕಾರಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗದಗ: ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಹಾಡು ಒಳಗೊಂಡಿರುವ `ಭಾಗ್ ಮಿಲ್ಖಾ ಭಾಗ್' ಚಿತ್ರ ಬಹಿಷ್ಕರಿಸಬೇಕು ಎಂದು ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ಸದಸ್ಯರು ಭಾನುವಾರ ಪ್ರತಿಭಟನೆ ನಡೆಸಿದರು.ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ಗಾಂಧಿವೃತ್ತದಲ್ಲಿ ಮಾನವ ಸರಪಳಿ ರಚಿಸಿ ಚಿತ್ರ ಪ್ರದರ್ಶನ ನಿಲ್ಲಿಸುವಂತೆ ಘೋಷಣೆ ಕೂಗಿದರು.ಚಲನಚಿತ್ರದಲ್ಲಿ ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಗೌರವಿಸುವ ಶಬ್ಧಗಳು ಹಾಡಿನಲ್ಲಿ ಒಳಗೊಂಡಿದೆ. ಹವನ ಹಿಂದೂ ಧರ್ಮದಲ್ಲಿ ಪವಿತ್ರ ಧಾರ್ಮಿಕ ಅನುಷ್ಠಾನವಾಗಿದೆ. ಆದ್ದರಿಂದ ಈ ಶಬ್ಧವನ್ನು ತಪ್ಪಾಗಿ ಉಪಯೋಗಿಸಿದ್ದರಿಂದ ವಿಶ್ವದಲ್ಲಿರುವ ಕೋಟ್ಯಂತರ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ. ಆದ್ದರಿಂದ ಚಿತ್ರಮಂದಿರದ ಮಾಲೀಕರು ಸಹ ಚಿತ್ರ ಪ್ರದರ್ಶನವನ್ನು ತಕ್ಷಣ ನಿಲ್ಲಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.ಈ ಚಿತ್ರಕ್ಕೆ ನೀಡಿರುವ ಪ್ರಮಾಣಪತ್ರ ರದ್ದುಗೊಳಿಸಬೇಕು ಎಂದು ಕೇಂದ್ರ ಚಲನಚಿತ್ರ ಪರಿವೀಕ್ಷಣಾ ಮಂಡಳಿಗೆ (ಸೆನ್ಸಾರ್ ಬೋರ್ಡ್) ಪತ್ರ ಬರೆಯಲಾಗಿದೆ. ಚಲನಚಿತ್ರಗಳು ಹಿಂದೂಗಳ ಧಾರ್ಮಿಕ ಭಾವನೆಯನ್ನು ವಿವಿಧ ರೀತಿಯಲ್ಲಿ ಅವಮಾನ ಮಾಡುತ್ತಿವೆ. ಈ ಹಾಡನ್ನು ಚಿತ್ರದಿಂದ ತೆಗೆದು ಹಾಕಬೇಕು. ಇಲ್ಲದಿದ್ದರೆ ಚಿತ್ರವನ್ನು ಬಹಿಷ್ಕರಿಸಲು ಕರೆ ನೀಡಲಾಗುವುದು ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಮಿತಿಯ ಜಿ.ಆರ್. ಹಿರೇಮಠ್, ಮುಂಗಂಡದ, ರಾಜು, ಮಹೇಶ, ರಾಘವೇಂದ್ರ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.